ತೆಂಕನಿಡಿಯೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ,ಸೂಕ್ತ ಅಭ್ಯರ್ಥಿಗೆ ಮತ ಚಲಾಯಿಸಿದ್ದೇವೆ
ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯತ್ ಇದರ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಪಂಚಾಯತ್ ಸದಸ್ಯರಾಗಿದ್ದ ತನ್ನನ್ನು ಮತ್ತು ಭೋಜರಾಜ್ ಶೆಟ್ಟಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಬಿಜೆಪಿ ನಗರ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿಕೆ ನೀಡಿರುವುದು ಹಾಸ್ಯಾಸ್ಪದವಾಗಿದೆ ಎಂದು ತೆಂಕನಿಡಿಯೂರು ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಸುರೇಶ್ ನಾಯಕ್ ಸ್ಪಷ್ಟಪಡಿಸಿದ್ದಾರೆ.
ಗ್ರಾಮದ ಅಭಿವೃದ್ಧಿಗೆ ಸಮರ್ಥ ಅಭಿವೃದ್ಧಿಗೆ ಮತ ಚಲಾಯಿಸಿದ್ದೇವೆ ವಿನಃ ಯಾವುದೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ ಅದರಲ್ಲೂ ಗ್ರಾಮಪಂಚಾಯತ್ ಮಟ್ಟದ ಚುನಾವಣೆ ಪಕ್ಷ ರಹಿತವಾಗಿ ನಡೆಯುವಂತದ್ದೂ ಹಾಗಿದ್ದು ಈ ರೀತಿ ಹೇಳಿಕೆ ನೀಡುತ್ತಿರುವುದು ನಗರ ಬಿಜೆಪಿ ಅಧ್ಯಕ್ಷರಿಗೆ ರಾಜಕೀಯದ ಅನುಭವದ ಕೊರತೆ ಎದ್ದು ಕಾಣುತ್ತದೆ.
ಕಳೆದ 3-4 ವರ್ಷಗಳಿಂದ ತೆಂಕನಿಡಿಯೂರು ಮತ್ತು ಕೆಳಾರ್ಕಳಬೆಟ್ಟು ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯದ ಹಿನ್ನಲೆಯಲ್ಲಿ ಸೂಕ್ತ ಅಭ್ಯರ್ಥಿಗೆ ಮತ ಚಲಾಯಿಸಿದ್ದೇವೆ. ಪಕ್ಷ ಎಲ್ಲಾ ಕಾರ್ಯಕರ್ತರಿಗೆ ಸೇರಿದ್ದು ವಿನಹ ಯಾರ ಒಬ್ಬರ ಆಸ್ತಿಯೂ ಅಲ್ಲ ಬಿಜೆಪಿ ನಗರ ಅಧ್ಯಕ್ಷರು ಕೀಳು ಮಟ್ಟದ ರಾಜಕೀಯ ಮಾಡುವುದು ಸರಿಯಲ್ಲ. ಗ್ರಾಮದ ಸಮಗ್ರ ಅಭಿವೃದ್ಧಿಯೇ ಮುಖ್ಯ ಎನ್ನುವುದನ್ನು ಅವರು ಮೊದಲು ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಪ್ರಕಟಣೆಯಲ್ಲಿ ತಿಳಿಸದ್ದಾರೆ.