Home Mangalorean News Kannada News ದಕ್ಷತೆ ಮತ್ತು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಸೂಚನೆ

ದಕ್ಷತೆ ಮತ್ತು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಸೂಚನೆ

Spread the love

ದಕ್ಷತೆ ಮತ್ತು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಸೂಚನೆ

ಹಾಸನ: ಲೋಕಸಭಾ ಚುನಾವಣೆಯಲ್ಲಿಯೂ ಪತ್ರಿಯೊಂದು ತಂಡವು ದಕ್ಷತೆಯಿಂದ ಹಾಗೂ ಜಾಗ್ರತೆಯಿಂದ ಕೆಲಸ ಮಾಡಬೇಕು ನಿಲಕ್ಷ್ಯ ವಹಿಸುವವರು ಕ್ರಮ ಎದುರಿಸಲು ಸಿದ್ದರಿರಬೇಕು ಎಂದು ನೂತನ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಸೂಚನೆ ನೀಡಿದರು.

ಮುಖ್ಯ ಚುನಾವಣಾ ಆಯುಕ್ತರ ಸಭೆಯ ನಂತರ ಅಧಿಕಾರಿಗಳ ಸಭೆ ನಡೆಸಿದ ಅವರು ಈ ವರೆಗಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಆಗಬೇಕಿರುವ ಸುಧಾರಣೆಗಳ ಬಗ್ಗೆ ಚುನಾವಣಾ ಆಯೋಗ ನಿರ್ದೇಶನಗಳನ್ನು ನೀಡಿದೆ ಹಾಗಾಗಿ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಬೇಕು ಎಂದರು.

ಬ್ಯಾಂಕ್‍ಗಳಲ್ಲಿ 1 ಲಕ್ಷದಿಂದ 10 ಲಕ್ಷದ ವರೆಗಿನ ಹಣ ವರ್ಗಾವಣೆ ಬಗ್ಗೆ ಗಮನ ಹರಿಸಲು ಮತ್ತು ವರದಿ ಮಾಡಲು, ಸಾಮಾಜಿಕ ಜಾಲತಾಣಗಳ ಪರಿಶೀಲನೆಗೂ ಪ್ರತ್ಯೇಕ ತಂಡಗಳ ರಚನೆ ಮಾಡಲಾಗುವುದು ಎಂದು ಅವರು ಹೇಳಿದರು.

ಅಬಕಾರಿ ಅಧಿಕಾರಿಗಳು ಅತ್ಯಂತ ಗಂಭೀರವಾಗಿ ಪರಿಶೀಲನೆ ಮಾಡಬೇಕು. ನಿಯಮ ಉಲ್ಲಂಘನೆ ಮಾಡುವ ಬಾರ್, ವೈನ್‍ಶಾಪ್‍ಗಳ ಪರವಾನಗಿಯನ್ನು ಅಮಾನತುಗೊಳಿಸಬೇಕು.

ಯಾವುದೇ ಕಾರಣಕ್ಕೂ ಅಕ್ರಮ ಮದ್ಯ ಸಾಗಾಟಕ್ಕೆ ಆಸ್ಪದ ನೀಡಬಾರದು ಈ ಬಗ್ಗೆ ಅಬಕಾರಿ ಅಧಿಕಾರಿಗಳು ವಿಶೇಷ ನಿಗಾ ವಹಿಸಬೇಕೆಂದರು.

ಪ್ಲೈಯಿಂಗ್ ಸ್ಕ್ವಾಡ್ ಹಾಗೂ ಸರ್ವೇಲೆನ್ಸ್ ತಂಡಗಳ ತಾಲ್ಲೂಕುವಾರು ವಾಟ್ಸಾಪ್ ಗ್ರೂಪ್ ಮಾಡಿ ಅದರ ಮೂಲಕ ನೀತಿ ಸಂಹಿತೆ ಜಾರಿ ಕ್ರಮಗಳ ಮೇಲೆ ನಿಗಾವಹಿಸಬೇಕೆಂದರು.

ಪ್ಲೈಯಿಂಗ್ ಸ್ಕ್ವಾಡ್ ಮತ್ತು ಸ್ಪಾಟಿಂಗ್ ತಂಡಗಳು ತಮ್ಮ ಗಸ್ತನ್ನು ಹೆಚ್ಚಿಸಬೇಕು ಎಲ್ಲವನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕು. ಸಿ.ವಿಜಿಲ್ ಆ್ಯಪ್ ಬಳಕೆ ಬಗ್ಗೆ ಇನ್ನಪ್ಟು ಅರಿವು ಮೂಡಿಸಬೇಕು ಅದನ್ನು ಕನ್ನಡದಲ್ಲಿ ಎಲ್ಲಾರಿಗೂ ಅರ್ಥವಾಗುವಂತೆ ಭಾಷಾಂತರಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಂತೆ ತಿಳಿಸಿದರು.

ಅಭ್ಯರ್ಥಿಗಳ ವೆಚ್ಚದ ಬಗ್ಗೆ ನಿಗಾವಹಿಸಬೇಕು. ಒಟ್ಟಾರೆ ಆಯಾಯ ತಂಡಗಳು ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಅರಿತು ಅದನ್ನು ದಕ್ಷತೆಯಿಂದ ಅನುಷ್ಠಾನಕ್ಕೆ ತರಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎ.ಎನ್ ಪ್ರಕಾಶ್ ಗೌಡ, ಸಹಾಯಕ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.


Spread the love

Exit mobile version