ದಕ್ಷಿಣ ಕನ್ನಡದಲ್ಲಿ ಮತ್ತೊಬ್ಬರಿಗೆ ಕೋವಿಡ್ ದೃಢ ; ಸೋಂಕಿತರ ಸಂಖ್ಯೆ 8 ಕ್ಕೆ ಏರಿಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ 34 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್ -19 ಸೋಂಕು ತಗಲಿರುವುದು ಮಂಗಳವಾರ ದೃಢಪಟ್ಟಿದ್ದು ಇದರೊಂದಿಗೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಎಂಟಕ್ಕೇರಿದೆ.
ದುಬೈ ಗೆ ತೆರಳಿದ್ದ ವ್ಯಕ್ತಿ ಮಾರ್ಚ್ 18ರಂದು ಏರ್ ಇಂಡಿಯಾ ವಿಮಾನದಲ್ಲಿ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದು ಆ ದಿನವೇ ತಪಾಸಣೆ ವೇಳೆ ಸೋಂಕಿನ ಲಕ್ಷಣಗಳಿಲ್ಲದ ಕಾರಣ ಹೋಂ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚಿಸಲಾಗಿತು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಿಳಿಸಿದ್ದಾರೆ.
ಮಾರ್ಚ್ 28 ರಂದು ಸುಳ್ಯ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು ಸೋಮವಾರ ಅವರ ಗಂಟಲಿನ ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಮಂಗಳವಾರ ವರದಿ ಬಂದಿದ್ದು ಸೋಂಕು ಇರುವುದು ದೃಢಪಟ್ಟಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.