ದಕ್ಷಿಣ ಕನ್ನಡ, ಉಡುಪಿ ನಗರ ಸ್ಥಳೀಯ ಸಂಸ್ಥೆ ಮೀಸಲಾತಿ ಪ್ರಕಟ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಮತ್ತು ಪುತ್ತೂರು ನಗರಸಭೆಗಳು ಹಾಗೂ ಬಂಟ್ವಾಳ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ಪ್ರಕಟವಾಗಿದೆ.
ಉಳ್ಳಾಲ ನಗರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗಗಳ ‘ಎ’ ಪ್ರವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗಗಳ ‘ಬಿ’ ಪ್ರವರ್ಗಕ್ಕೆ ಮೀಸಲಾಗಿದೆ. ಪುತ್ತೂರು ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದೆ. ಬಂಟ್ವಾಳ ಪುರಸಭೆಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗಗಳ ‘ಎ’ ಪ್ರವರ್ಗಕ್ಕೆ ಮೀಸಲಾಗಿದೆ.
ಉಡುಪಿ ನಗರಸಭೆ ಅಧ್ಯಕ್ಷ ಸ್ಥಾನ ಬಿಸಿಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಕಾರ್ಕಳ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಕುಂದಾಪುರ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಿಡಲಾಗಿದೆ. ಸಾಲಿಗ್ರಾಮ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.