ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದ ಬಿಜೆಪಿ :ಸಂಸದ ನಳಿನ್ ಕುಮಾರ್
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂರು ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಬಿಜೆಪಿ ಒಟ್ಟು 42 ವಾರ್ಡ್ಗಲ್ಲಿ ಜಯ ಸಾಧಿಸುವ ಮೂಲಕ ಅತಿ ಹೆಚ್ಚು ಸ್ಥಾನ ಗೆದ್ದ ಪಕ್ಷವಾಗಿದೆ. ಈ ಮೂರು ಸಂಸ್ಥೆಗಳಲ್ಲಿ ಕಾಂಗ್ರೆಸ್ ಅಧಿಕಾರ ಕಳಕೊಂಡಿದೆ. ಮತದಾರರು ಬಿಜೆಪಿ ಮೇಲೆ ವಿಶ್ವಾಸವಿರಿಸಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಪಕ್ಷ ಇನ್ನಷ್ಟು ಬಲವರ್ಧನೆಯಾಗಿದೆ ಎಂದು ದ..ಕ.ಸಂಸದ ನಳಿನ್ಕುಮಾರ್ ಕಟೀಲ್ ತಿಳಿಸಿದ್ದಾರೆ.
ಪುತ್ತೂರು ನಗರಸಭೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದರೆ, ಬಂಟ್ವಾಳ ಪುರಸಭೆಯಲ್ಲಿ ಉತ್ತಮ ಸಾಧನೆ ಮಾಡಿದೆ. ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವನ್ನು ಮತದಾರರು ತಿರಸ್ಕರಿಸಿದ ಕಾರಣ ಉಳ್ಳಾಲ ನಗರಸಭೆಯಲ್ಲೂ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಮತದಾರರು ನೀಡಿದ ತೀರ್ಪಿಗೆ ಬದ್ಧರಾಗಿ ಬಿಜೆಪಿಯ ಪ್ರತಿನಿಧಿಗಳು ಮುಂದಿನ ದಿನಗಳಲ್ಲಿ ನಗರ ಸ್ಥಳೀಯಾಡಳಿತ ಸಂಸ್ಥೆಗಳ ಅಭಿವೃದ್ದಿಗೆ ಶ್ರಮಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.