ದಕ್ಷಿಣ ಕನ್ನಡ: ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ
ಮಂಗಳೂರು: ನಗರದ ಕಮಿಷನರೆಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಸ್ಥಿತಿ ಇರುವುದರಿಂದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಡಿಸೆಂಬರ್ 21ರ ಶನಿವಾರವೂ ಸಹ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಆದೇಶ ಹೊರಡಿಸಿದ್ದಾರೆ.
ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ ಡಿಸೆಂಬರ್ 22ರ ಆದಿತ್ಯವಾರದವರೆಗೆ ಕರ್ಫ್ಯೂ ಸ್ಥಿತಿ ಇರುವುದರಿಂದ ಹಾಗೂ ಜಿಲ್ಲೆಯಾದ್ಯಂತ ಶನಿವಾರವೂ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಈಗಾಗಲೇ ದ.ಕ. ಜಿಲ್ಲೆಯಾದ್ಯಂತ ಇಂಟರ್ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ.