ದಕ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

Torrential rain causing flood.
Spread the love

ದಕ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೆಪ್ಟೆಂಬರ್ 28 ಮತ್ತು ಸೆಪ್ಟೆಂಬರ್ 29ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 64.5ರಿಂದ 115.5 ಮಿಮಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೊತೆಗೆ, ಬೀದರ್, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನೈರುತ್ಯ ಮುಂಗಾರು ಚುರುಕಾಗಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಳೆ ತಗ್ಗಿದ್ದು, ಶಿವಮೊಗ್ಗ, ಮೈಸೂರು, ಮಂಡ್ಯ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಕೆಲವೆಡೆ ಸಾಧಾರಣ ಮಳೆಯಾಗಬಹುದು.


Spread the love