ದಕ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಹರೀಶ್ ಕುಮಾರ್ ನೇಮಕ

Spread the love

ದಕ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಹರೀಶ್ ಕುಮಾರ್ ನೇಮಕ

ಮಂಗಳೂರು: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸಿನ ಅಧ್ಯಕ್ಷರಾಗಿದ್ದ ಹರೀಶ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸಿನ ಅಧ್ಯಕ್ಷರಾಗಿ ಕೆಪಿಸಿಸಿ ಅಧ್ಯಕ್ಷರಾದ ಡಾ. ಜಿ ಪರಮೇಶ್ವರ್ ಅವರು ನೇಮಕ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಿರ್ಗಮನ ಅಧ್ಯಕ್ಷ ಬಿ ರಮಾನಾಥ ರೈ ಘೋಷಿಸಿದರು.

ಅವರು ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಟಿಯಲ್ಲಿ ಈ ಘೋಷಣೆಯನ್ನು ಮಾಡಿದರು. ಈ ಮೊದಲು ರಮಾನಾಥ ರೈ ಸಚಿವರಾದ ಬಳಿಕ ಇಬ್ರಾಹಿಂ ಕೋಡಿಜಾಲ್ ಅವರು ಜಿಲ್ಲಾ ಕಾಂಗ್ರೆಸಿನ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಿರ್ಗಮನ ಅಧ್ಯಕ್ಷ ರಮಾನಾಥ ರೈ ಅವರು ನೂತನ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಅದೇಶ ಪತ್ರವನ್ನು ಹಸ್ತಾಂತರಿಸಿದರು.

ಶಾಸಕರಾದ ಜೆ.ಆರ್. ಲೋಬೊ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಪದ್ಮನಾಭ ನರಿಂಗಾನ, ಶಾಲೆಟ್ ಪಿಂಟೊ, ವಿಶ್ವಾಸ್ ದಾಸ್, ನವೀನ್ ಡಿಸೋಜಾ ಹಾಗೂ ಇತರರು ಉಪಸ್ಥಿತರಿದ್ದರು.


Spread the love