Home Mangalorean News Kannada News ದಕ ಜಿಲ್ಲಾ ಪೊಲೀಸರಿಂದ ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಜಾಲ ಪತ್ತೆ- ಮೂವರ ಬಂಧನ

ದಕ ಜಿಲ್ಲಾ ಪೊಲೀಸರಿಂದ ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಜಾಲ ಪತ್ತೆ- ಮೂವರ ಬಂಧನ

Spread the love

ದಕ ಜಿಲ್ಲಾ ಪೊಲೀಸರಿಂದ ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಜಾಲ ಪತ್ತೆ- ಮೂವರ ಬಂಧನ

ಮಂಗಳೂರು: ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲವನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪತ್ತೆ ಹಚ್ಚಿದ್ದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ಮಂಜೇಶ್ವರ ನಿವಾಸಿ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು (36), ಮೊಹಮ್ಮದ್ ಶಫಿಕ್ (31) ಮತ್ತು ಬಂಟ್ವಾಳ ಕನ್ಯಾನ ನಿವಾಸಿ ಖಲಂದರ್ ಶಾಫಿ (26) ಎಂದು ಗುರುತಿಸಲಾಗಿದೆ.

ಅಗೋಸ್ತ್ 11 ರಂದು ಬೆಳಿಗ್ಗೆ 6.30 ರ ವೇಳೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ತಮ್ಮ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಠಾಣಾ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಪಾಟ್ರಕೋಡಿ ಎಂಬಲ್ಲಿ ಕೆಎ.19.ಎಎ.9294 ನೊಂದಣಿ ಸಂಖ್ಯೆಯ ಪಿಕ್ ಆಪ್ ವಾಹನ ಮತ್ತು ಕೆಎಲ್ 14-ಎಕ್ಸ್-9707 ನೊಂದಣಿ ಸಂಖ್ಯೆಯ ಕಾರೊಂದರಲ್ಲಿ ಅಕ್ರಮವಾಗಿ ಅಪಾರ ಪ್ರಮಾಣದ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಧಾಳಿ ನಡೆಸಿ ರೂ 17,50,000/- ಮೌಲ್ಯದ ಸುಮಾರು 175 ಕೆ.ಜಿ ಗಾಂಜಾ, ಸುಮಾರು ರೂ 3,00,000/- ಮೌಲ್ಯದ ಪಿಕ್ ಅಪ್ ವಾಹನ, ಸುಮಾರು ರೂ 4,00,000 /- ಮೌಲ್ಯದ ಕಾರು ಸೇರಿದಂತೆ ಒಟ್ಟು ರೂ 24,50,000/- ಸೊತ್ತುಗಳನ್ನು ವಶಕ್ಕೆ ಪಡೆದಿರುತ್ತಾರೆ. ಸದರಿ ಸೊತ್ತುಗಳೊಂದಿಗೆ ಮೂವರು ಆರೋಪಿಗಳನ್ನು ಬಂಧೀಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು ಎಂಬಾತನ ವಿರುದ್ದ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 7 ಪ್ರಕರಣ, ಕುಂಬಳೆ ಠಾಣೆಯಲ್ಲಿ 2 ಪ್ರಕರಣ ಹಾಗೂ ಖಲಂದರ್ ಶಾಫಿ ಎಂಬಾತನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ 2 ಅಕ್ರಮ ಗಾಂಜಾ ಪ್ರಕರಣ ಹಾಗು 1 ಕೊಲೆ ಯತ್ನ ಪ್ರಕರಣ ಮತ್ತು ಕಾವೂರು ಠಾಣೆಯಲ್ಲಿ 1 ಅಕ್ರಮ ಗಾಂಜಾ ಸಾಗಾಟ ಪ್ರಕರಣ ದಾಖಲಾಗಿರುತ್ತದೆ.


Spread the love

Exit mobile version