ದಕ ಜಿಲ್ಲಾ ಯುವ ಜೆಡಿಎಸ್ ವತಿಯಿಂದ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ
ಮಂಗಳೂರು: ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವರು, ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಹೆಚ್ ಡಿ ಕುಮಾರಸ್ವಾಮಿಯವರ ಹುಟ್ಟುಹಬ್ಬ ಪ್ರಯುಕ್ತ ದಕ ಜಿಲ್ಲಾ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ನಗರದಲ್ಲಿರುವ ನಿರಾಶ್ರಿತರಿಗೆ ಊಟ ಹಂಚುವುದರ ಮುಖಾಂತರ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ಯುವ ಜೆಡಿಎಸ್ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ಹಾಗು ಜಿಲ್ಲಾ ಸಂಘಟನಾ ಉಸ್ತುವಾರಿಯಾದ ರತೀಶ್ ಕರ್ಕೇರ, ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು, ಹಾಗು ಯುವ ಜೆಡಿಎಸ್ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ವಿನಿತ್ ಪೂಜಾರಿ, ರಿನಿತ್ ಪೂಜಾರಿ, ನಿಶಾಂತ್ ಪೂಜಾರಿ, , ಸುಶಾಂತ್ ಪೂಜಾರಿ, ಅಭಿಷೇಕ್, ಮುಂತಾದವರು ಪಾಲ್ಗೊಂಡಿದ್ದರು