ದಕ ಜಿಲ್ಲೆಯಲ್ಲಿ ಒಂದೇ ದಿನ ಬರೋಬ್ಬರಿ 238 ಮಂದಿಗೆ ಕೊರೋನಾ ಪಾಸಿಟಿವ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಗುರುವಾರ ಒಂದೇ ದಿನ ಬರೋಬ್ಬರಿ 238 ಮಂದಿಗೆ ಪಾಸಿಟಿವ್ ದೃಢಗೊಂಡಿದೆ.
ಗುರುವಾರ ಪತ್ತೆಯಾದ ಸೋಂಕಿತರಲ್ಲಿ 23 ಮಂದಿ ಪ್ರಾಥಮಿಕ ಸಂಪರ್ಕದಿಂದ, 106 ಮಂದಿಗೆ ಐಎಲ್ ಐ ನಿಂದ, 17 ಸಾರಿ, 19 ಮಂದಿ ಅಂತರಾಷ್ಟ್ರೀಯ ಪ್ರಯಾಣದಿಂದ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಅಲ್ಲದೆ 73 ಮಂದಿಯ ಸಂಪರ್ಕವನ್ನು ಪತ್ತೆ ಹಚ್ಚಲಾಗುತ್ತದೆ.