Spread the love
ದಕ ಜಿಲ್ಲೆಯಲ್ಲಿ ಕೊರೋನಾಗೆ 14 ನೇ ಬಲಿ – 57 ವರ್ಷದ ಮಹಿಳೆ ಸಾವು
ಮಂಗಳೂರು: ಮಹಾ ಮಾರಿ ಕೊರೊನಾ ಗೆ ದಕ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು ಈ ಮೂಲಕ ಕೊರೋನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೇರಿದೆ.
ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಳ್ಳಾಲದ 57 ವರ್ಷದ ಮಹಿಳೆ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ.
ಉಳ್ಳಾಲ ನಿವಾಸಿಯಾದ ಇವರು ಕೆಲವು ದಿನಗಳ ಹಿಂದೆ ಸೋಂಕಿಗೆ ತುತ್ತಾಗಿದ್ದು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
Spread the love