Home Mangalorean News Kannada News ದಕ ಜಿಲ್ಲೆಯಲ್ಲಿ ಕೋರೊನಾ ಸೋಂಕಿಗೆ 9 ನೇ ಬಲಿ – 70 ವರ್ಷದ ವೃದ್ದ ಸಾವು

ದಕ ಜಿಲ್ಲೆಯಲ್ಲಿ ಕೋರೊನಾ ಸೋಂಕಿಗೆ 9 ನೇ ಬಲಿ – 70 ವರ್ಷದ ವೃದ್ದ ಸಾವು

Spread the love

ದಕ ಜಿಲ್ಲೆಯಲ್ಲಿ ಕೋರೊನಾ ಸೋಂಕಿಗೆ 9 ನೇ ಬಲಿ – 70 ವರ್ಷದ ವೃದ್ದ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕಿಗೆ 9 ನೇ ಬಲಿ ಪಡೆದಿದ್ದು, ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆದ ದಾಖಲಾಗಿದ್ದ 70 ವರ್ಷದ ವೃದ್ದರೋಬ್ಬರು ಮೃತಪಟ್ಟಿದ್ದಾರೆ.

ಜೂನ್ 7 ರಂದು ಬೆಂಗಳೂರಿನಿಂದ ಆಗಮಿಸಿದ್ದ ವೃದ್ಧ ರು ಮದುಮೇಹ ಮತ್ತು ನ್ಯೂಮೋನಿಯದಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಜೂನ್ 12 ರಂದು ಅನಾರೋಗ್ಯದ ಹಿನ್ನಲೆಯಲ್ಲಿ ಸಾರಿ ಪ್ರಕರಣದ ಅಡಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ 70 ವರ್ಷದ ವೃದ್ದರೋರ್ವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ಅವರು ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.


Spread the love

Exit mobile version