ದಕ ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ ಕೋವಿಡ್-19 ಗೆ ಐದು ಬಲಿ- ಮೃತರ ಸಂಖ್ಯೆ 46ಕ್ಕೆ ಏರಿಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಮತ್ತೆ ಕೋವಿಡ್ಗೆ ಒಂದೇ ದಿನ ಮತ್ತೆ ಐವರು ಕೊರೋನಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.
ಮಂಗಳೂರಿನ ಉರ್ವಾಸ್ಟೋರ್ ನ 72 ವರ್ಷದ ವೃದ್ಧ, ಬಳ್ಳಾಲ್ಭಾಗ್ ನಿವಾಸಿ 60 ವರ್ಷದ ವೃದ್ಧೆ, ಬಂದರು ನಿವಾಸಿ 68 ವರ್ಷದ ವೃದ್ಧೆ, ಬೆಳ್ತಂಗಡಿಯ ಪಿಲಿಚಾಮುಂಡಿಕಲ್ಲು ನಿವಾಸಿ 60 ವರ್ಷದ ವೃದ್ಧ, ಪುತ್ತೂರಿನ ಮೂಲಡ್ಕದ 50 ವರ್ಷದ ವ್ಯಕ್ತಿ ಕೋವಿಡ್ಗೆ ಬಲಿಯಾಗಿದ್ದಾರೆ.
ಮೃತಪಟ್ಟ ಐವರ ಪೈಕಿ ನಾಲ್ವರು ಮಂಗಳೂರು ಸರಕಾರಿ ಜಿಲ್ಲಾ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರೆ ಇನ್ನೋರ್ವ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.