Home Mangalorean News Kannada News ದಕ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್

ದಕ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್

Spread the love

ದಕ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ.

ರಾಜ್ಯ ಹೆಲ್ತ್ ಬುಲೆಟಿನ್ ಪ್ರಕಾರ ಖತಾರ್ ನಿಂದ ಆಗಮಿಸಿ ಬೆಂಗಳೂರಿನಲ್ಲಿ ಕ್ವಾರಂಟೈನ್ ನಲ್ಲಿದ್ದ 37, 27 ಮತ್ತು 30 ವರ್ಷದ ಯುವಕರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಿದ್ದ ವೇಳೆ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಮೂವರಿಗೂ ಬೆಂಗಳೂರಿನ ನಿಗದಿತ ಕೊರೋನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಇದರಿಂದ ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ.


Spread the love

Exit mobile version