Home Mangalorean News Kannada News ದಕ ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಪ್ರಕರಣ – ಬಂಟ್ವಾಳದ 33 ವರ್ಷದ ಮಹಿಳೆಗೆ ಸೋಂಕು...

ದಕ ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಪ್ರಕರಣ – ಬಂಟ್ವಾಳದ 33 ವರ್ಷದ ಮಹಿಳೆಗೆ ಸೋಂಕು ದೃಢ

Spread the love

ದಕ ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಪ್ರಕರಣ – ಬಂಟ್ವಾಳದ 33 ವರ್ಷದ ಮಹಿಳೆಗೆ ಸೋಂಕು ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮತ್ತೊಂದು ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಬಂಟ್ವಾಳ ತಾಲೂಕಿನ 33 ವರ್ಷದ ಮಹಿಳೆಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

ರೋಗಿ ಸಂಖ್ಯೆ ಪಿ 409 ರ ಜೊತೆ ಸಂಪರ್ಕ ಹೊಂದಿರುವ ಬಂಟ್ವಾಳ ಕಸಬಾ ನಿವಾಸಿ ಸುಮಾರು 33 ವರ್ಷದ ಮಹಿಳೆಯ ಗಂಟಲು ದ್ರವ ಪರೀಕ್ಷೆ ವರದಿ ಸ್ವೀಕೃತವಾಗಿದ್ದು, ಇವರಿಗೆ ಸೋಂಕು ಇರುವುದು ದೃಢಪಟ್ಟಿರುತ್ತದೆ. ಇವರಿಗೆ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.


Spread the love

Exit mobile version