Spread the love
ದಕ ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ 311 ಕೊರೋನಾ ಪಾಸಿಟಿವ್ ದೃಢ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 311 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಪಾಸಿಟಿವ್ ಸೋಂಕಿತರ ಸಂಖ್ಯೆ 3074ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಒಟ್ಟಾರೆ 26242ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 23,169 ಮಂದಿಗೆ ವರದಿ ನೆಗೆಟಿವ್ ಬಂದಿದೆ.
ಒಟ್ಟು 3074 ಮಂದಿಗೆ ಕೋವಿಡ್–19 ದೃಢವಾಗಿದ್ದು, ಶುಕ್ರವಾರದ 115 ಮಂದಿ ಸೇರಿದಂತೆ ಇದುವರೆಗೆ 1278ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಜಿಲ್ಲೆಯಲ್ಲಿ 1725ಸಕ್ರಿಯ ಪ್ರಕರಣಗಳಿದ್ದು, ಸರ್ಕಾರಿ ವೆನ್ಲಾಕ್ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Spread the love