ದಕ ಜಿಲ್ಲೆಯಲ್ಲಿ 5 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ; ಒಂದು ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 5 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಒಂದು ಸಾವು ಸಂಭವಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋರೊನಾ ಸೋಂಕಿತರ ಸಂಖ್ಯೆ 268 ಕ್ಕೆ ಏರಿಕೆಯಾಗಿದೆ.
ರಾಜ್ಯ ಹೆಲ್ತ್ ಬುಲೆಟಿನ್ ಪ್ರಕಾರ ಐದು ಪಾಸಿಟಿವ್ ಪ್ರಕರಣಗಳಲ್ಲಿ ಎರಡು ಮಹಾರಾಷ್ಟ್ರದಿಂದ, ಎರಡು ಸೌದಿ ಅರೇಬಿಯಾದಿಂದ ಬಂದವರಾಗಿದ್ದು ಒಂದು ಪ್ರಕರಣದ ಪೇಶಂಟ್ ಸಂಖ್ಯೆ 4526 ರ ಸಂಪರ್ಕದಿಂದಾಗಿ ಬಂದಿರುವುದಾಗಿದೆ.
ಅಲ್ಲದೆ ಮಹಾರಾಷ್ಟ್ರದಿಂದ ವಾಪಾಸಾದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ26 ವರ್ಷದ ಯುವಕ ಭಾನುವಾರ ಚಿಕಿತ್ಸೆ ಫಲಕಾರಿಯಾಗದ ಮೃತಪಟ್ಟಿದ್ದಾರೆ. ಮೃತ ಯುವಕನಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿತ್ತು