Spread the love
ದಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಶಸಿಕಾಂತ್ ಸೆಂಥಿಲ್ ಅಧಿಕಾರ ಸ್ವೀಕಾರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಶಸಿಕಾಂತ್ ಸೆಂಥಿಲ್ ಎಸ್. ಗುರುವಾರ ಅಧಿಕಾರ ಸ್ವೀಕರಿಸಿದರು.
ಪ್ರಭಾರ ಜಿಲ್ಲಾಧಿಕಾರಿ ಕುಮಾರ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ, ಸ್ವಾಗತಿಸಿದರು. ಸಸಿಕಾಂತ್ ಸೆಂಥಿಲ್ ಅವರು ಇದುವರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
Spread the love