Home Mangalorean News Kannada News ದಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ. 9ರಂದು ರಜೆ ಘೋಷಣೆ ಮಾಡಿಲ್ಲ- ಸುಳ್ಳು ಸುದ್ದಿ ಹಬ್ಬಿಸುವವರ...

ದಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ. 9ರಂದು ರಜೆ ಘೋಷಣೆ ಮಾಡಿಲ್ಲ- ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕ್ರಮ

Spread the love

ದಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ. 9ರಂದು ರಜೆ ಘೋಷಣೆ ಮಾಡಿಲ್ಲ- ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಯವರ ಹೆಸರಿನಲ್ಲಿ ಕೆಲವೊಂದು ಕಿಡಿಗೇಡಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿದ್ದು ಅಂತಹವರ ವಿರುದ್ದ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

ಅಗಸ್ಟ್ 9 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವುದು ಗಮನಕ್ಕೆ ಬಂದಿದ್ದು, ಜಿಲ್ಲಾಧಿಕಾರಿಯವರು ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಲ್ಲಿ ಸಂಚರಿಸುತ್ತಿದ್ದು ಯಾವುದೇ ರಜೆ ಘೋಷಣೆ ಮಾಡಿಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿರುವ ಪ್ರಕಟಣೆ ಅಗಸ್ಟ್ 7 ರಂದು ಹೊರಡಿಸಿರುವ ಪ್ರಕಟಣೆಯಾಗಿದ್ದುಇದನ್ನು ಕಿಡಿಗೇಡಿಗಳು ದಿನಾಂಕವನ್ನು ತಿದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಇದರಿಂದ ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದಂತೆ ಕೋರಲಾಗಿದ್ದು, ರಜೆ ನೀಡಿದ್ದಲ್ಲಿ ಜಿಲ್ಲಾ ವಾರ್ತಾ ಇಲಾಖೆಯಿಂದ ಮಾಧ್ಯಮಗಳಿಗೆ ತಿಳಿಸಲಾಗುವುದು ಎಂದು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ಕೆಲವರು ಶಾಲಾ ಕಾಲೇಜುಗಳ ರಜೆ ವಿಷಯದಲ್ಲಿ ಪದೇ ಪದೇ ಸಾರ್ವಜನಿಕರಲ್ಲಿ ಗೊಂದಲಗಳನ್ನು ಸೃಷ್ಟಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಅಂತಹವರ ವಿರುದ್ದ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ


Spread the love

Exit mobile version