Home Mangalorean News Kannada News ದಸರಾದಲ್ಲಿ ಕೊರಗ ಜನಾಂಗದ ದುರ್ಬಳಕೆ: ತಹಶೀಲ್ದಾರ್ ಎಚ್ಚರಿಕೆ

ದಸರಾದಲ್ಲಿ ಕೊರಗ ಜನಾಂಗದ ದುರ್ಬಳಕೆ: ತಹಶೀಲ್ದಾರ್ ಎಚ್ಚರಿಕೆ

Spread the love

ದಸರಾದಲ್ಲಿ ಕೊರಗ ಜನಾಂಗದ ದುರ್ಬಳಕೆ: ತಹಶೀಲ್ದಾರ್ ಎಚ್ಚರಿಕೆ
ಮ0ಗಳೂರು: ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ, ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡುವುದು ಮತ್ತು ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು , ತಲೆಕೂದಲುಗಳನ್ನು ಊಟದಲ್ಲಿ ಹಾಕಿ ಉಣಲು ನೀಡುವುದು, ಬೇರೆ ಜನಾಂಗದವರ ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಂಡು ಮಗುವಿನ ಕಾಯಿಲೆಯನ್ನು ಕೊರಗ ಜನಾಂಗದವರಿಗೆ ಹರಡುವಂತೆ ಮಾಡುವುದು, ದ.ಕ.ಜಿಲ್ಲೆಯ ಜಾನಪದ ಕ್ರೀಡೆಯಾದ ಕಂಬಳದಲ್ಲಿ ಕೆರೆಯಲ್ಲಿ ಕುಪ್ಪಿಚೂರು,ಮುಳ್ಳು ಮುಂತಾದವುಗಳು ಇರುವ ಬಗ್ಗೆ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕೊರಗ ಜನಾಂಗದವರನ್ನು ಬಳಸಿಕೊಳ್ಳುವುದು, ಜಾತ್ರೆ, ಕಂಬಳ ಮತ್ತು ಇನ್ನಿತರ ಸಾರ್ವಜನಿಕ ಸಮಾರಂಭಗಳಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದು ಮತ್ತು ಬೇರೆ ಜನಾಂಗದವರ ಹೆಂಗಸರಿಗೆ ಸೀಮಂತದ ದಿನ ಹೆಂಗಸಿನ ಸೀಮಂತದ ಎಂಜಲು ಊಟವನ್ನು ಕೊರಗ ಜನಾಂಗದ ಮಹಿಳೆಯನ್ನು ಕರೆದು ಎಂಜಲು ಊಟ ನೀಡಿ ಸೀಮಂತಳ ಮೇಲಿರುವ ದೃಷ್ಟಿಯನ್ನು ತೆಗೆಯಲು ಬಳಸಿಕೊಳ್ಳುವುದು ಮತ್ತಿತರ ಚಟುವಟಿಕೆಗಳು ಕೊರಗರ ಅಜಲು ಪದ್ದತಿ ನಿಷೇಧ ಕಾಯ್ದೆಯಡಿ ಬರುವುದರಿಂದ ಇಂತಹ ಆಚರಣೆಗಳು ಕಂಡು ಬಂದಲ್ಲಿ ಅಂತಹ ಪ್ರಕರಣಗಳನ್ನು ಪರಿಶಿಷ್ಟ ಜಾತಿ ಮತ್ತು ಪ.ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989 ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು. ಅಲ್ಲದೆ 5 ರಿಂದ 6 ವರ್ಷಗಳವರೆಗೆ ಕಾರಾಗೃಹ ವಾಸ ಮತ್ತು ರೂ.5000 ದಂಡ ವಿಧಿಸಲಾಗುವುದು ಎಂದು ಮಂಗಳೂರು ತಹಶೀಲ್ದಾರ್ ಎಚ್ಚರಿಸಿದ್ದಾರೆ.
ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಕೂಡಲೇ ವಿಷಯ ತಿಳಿಸಲು ಮಂಗಳೂರು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version