Home Mangalorean News Kannada News ದಾವಣಗೆರೆಯಿಂದ ಉಡುಪಿಗೆ ಚಿಕಿತ್ಸೆಗೆ ಆಗಮಿಸಿದ್ದ ವೃದ್ಧ ಆಸ್ಪತ್ರೆಯಲ್ಲಿ ಸಾವು – ಮೃತ ವ್ಯಕ್ತಿಗೆ ಕೋವಿಡ್ ಪಾಸಿಟಿವ್...

ದಾವಣಗೆರೆಯಿಂದ ಉಡುಪಿಗೆ ಚಿಕಿತ್ಸೆಗೆ ಆಗಮಿಸಿದ್ದ ವೃದ್ಧ ಆಸ್ಪತ್ರೆಯಲ್ಲಿ ಸಾವು – ಮೃತ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ದೃಢ

Spread the love

ದಾವಣಗೆರೆಯಿಂದ ಉಡುಪಿಗೆ ಚಿಕಿತ್ಸೆಗೆ ಆಗಮಿಸಿದ್ದ ವೃದ್ಧ ಆಸ್ಪತ್ರೆಯಲ್ಲಿ ಸಾವು – ಮೃತ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ದೃಢ

ಉಡುಪಿ: ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದಾವಣಗೆರೆಯ ವ್ಯಕ್ತಿಯೊಬ್ಬರು ಶುಕ್ರವಾರ ಮೃತಪಟ್ಟಿದ್ದು ಅವರ ಗಂಟಲ ದ್ರವ ಪರೀಕ್ಷಾ ವರದಿಯಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ

ಆರೋಗ್ಯ ಸಮಸ್ಯೆಯ ಕಾರಣಕ್ಕಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ಜುಲೈ 9 ರಂದು ದಾವಣೆಗೆರೆಯ ವೃದ್ಧರೊಬ್ಬರು ದಾಖಲಾಗಿದ್ದು ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಅವರ ಗಂಟಲ ದ್ರವ ಪರೀಕ್ಷೆ ಮಾಡಲಾಗಿದ್ದು ಪರೀಕ್ಷಾ ವರದಿಯಲ್ಲಿ ಕೋವಿಡ್ -19 ಪಾಸಿಟಿವ್ ಬಂದಿದೆ.

ಸದ್ಯ ಉಡುಪಿಯಲ್ಲೇ ಮೃತ ವ್ಯಕ್ತಿಯ ಅಂತಿಮ ಸಂಸ್ಕಾರಕ್ಕೆ ಸಿದ್ದತೆ ಮಾಡಲಾಗಿದೆ ಎಂದು ತಿಳಿದು ಬಂದಿದೆ


Spread the love

Exit mobile version