Home Mangalorean News Kannada News ದುಬೈ ನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೊದಲ ವಿಮಾನ

ದುಬೈ ನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೊದಲ ವಿಮಾನ

Spread the love
RedditLinkedinYoutubeEmailFacebook MessengerTelegramWhatsapp

ದುಬೈ ನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೊದಲ ವಿಮಾನ

ಮಂಗಳೂರು: ಲಾಕ್ ಡೌನ್ ಬಳಿಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಮೊದಲ ವಿಮಾನ ಇಂದು ರಾತ್ರಿ ಬಂದಿಳಿಯಿತು.

ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ಸುಮಾರು 176 ಪ್ರಯಾಣಿಕರನ್ನು ಹೊತ್ತು ತಂದ ವಿಮಾನ ರಾತ್ರಿ 10.10 ಕ್ಕೆ ಲ್ಯಾಂಡ್ ಆಯಿತು.

ಪ್ರಯಾಣಿಕರಿಗೆ ಇಳಿದ ನಂತರ ವಿಮಾನ ನಿಲ್ದಾಣದಲ್ಲಿ ಹಣ ವರ್ಗಾವಣೆ, ಸಿಮ್ ವಿತರಣೆ, ಆರೋಗ್ಯ ಕಿಟ್ ವಿತರಣೆ, ಉಪಹಾರ ವ್ಯವಸ್ಥೆ ಮಾಡಲಾಯಿತು.

ನಂತರ ಆರೋಗ್ಯ ಇಲಾಖೆಯ ತಪಾಸಣಾ ತಂಡದಿಂದ ಪ್ರತೀ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಲಾಯಿತು. ಪ್ರಯಾಣಿಕರಿಗೆ ಸ್ಟಾಂಪಿಂಗ್ ಮಾಡಿ, ಇಮಿಗ್ರೇಷನ್ ಪ್ರಕ್ರಿಯೆ ನಡೆಸಲಾಯಿತು.

ವಿಮಾನ ಆಗಮನ ಸಂದರ್ಭದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ರಾಹುಲ್ ಶಿಂಧೆ,ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ, ವಿಮಾನ ನಿಲ್ದಾಣ ನಿರ್ದೇಶಕ ವಿ.ವಿ. ರಾವ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.


Spread the love

Exit mobile version