ದೇರಳಕಟ್ಟೆ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್‌ ಢಿಕ್ಕಿ; ವಿದ್ಯಾರ್ಥಿನಿ ಮೃತ್ಯು

Spread the love

ದೇರಳಕಟ್ಟೆ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್‌ ಢಿಕ್ಕಿ; ವಿದ್ಯಾರ್ಥಿನಿ ಮೃತ್ಯು

ದೇರಳಕಟ್ಟೆ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 4ನೇ ತರಗತಿಯ ವಿದ್ಯಾಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಗುರುವಾರ ಸಂಭವಿಸಿದೆ.

ಬಡಕಬೈಲು ನಿವಾಸಿ ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11 ) ಮೃತ ವಿದ್ಯಾರ್ಥಿನಿ.

ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ಆಟೋ ರಿಕ್ಷಾಗೆ ಕಲ್ಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ದಿಂದ ಬಂದ ಪಿಕಪ್‌ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾ ಪಲ್ಟಿಯಾಗಿ ಆಯಿಷಾ ವಹಿಬಾ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ.

ರಿಕ್ಷಾದಲ್ಲಿದ್ದ ಇತರ ಮೂವರು ವಿದ್ಯಾರ್ಥಿಗಳು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ರಿಕ್ಷಾ ಚಾಲಕನಿಗೂ ಗಾಯವಾಗಿದೆ. ಗಾಯಾಳುಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments