ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ – ಟಾಪ್ ಮೂರು ಜಿಲ್ಲೆಗಳ ಪಟ್ಟಿಯಲ್ಲಿ ಉಡುಪಿ, ದಕ, ಕೊಡಗು

Spread the love

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ – ಟಾಪ್ ಮೂರು ಜಿಲ್ಲೆಗಳ ಪಟ್ಟಿಯಲ್ಲಿ ಉಡುಪಿ, ದಕ, ಕೊಡಗು

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕೃತವಾಗಿ ಪ್ರಕಟಿಸಿದ್ದು  ಈ ವರ್ಷ ಶೇಕಡಾ 68.73ರಷ್ಟು ಫಲಿತಾಂಶ ಗಳಿಸಿ ಹುಡುಗಿಯರೇ ಮೇಲಗೈ ಸಾಧಿಸಿದ್ದಾರೆ.

2019-20 ನೇ ಸಾಲಿನಲ್ಲಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದು ದ್ವಿತೀಯ ಸ್ಥಾನಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಿದ್ದು, ಕೊಡಗು ತೃತೀಯ ಸ್ಥಾನಿಯಾಗಿದೆ.

ಈ ಬಾರಿ ಒಟ್ಟಾರೆ ಶೇಕಡ 69.20 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಳೆದ ವರ್ಷ ಶೇಕಡಾ 68.68ರಷ್ಟಿತ್ತು.

ಈ ಬಾರಿ ಬಾಲಕಿಯರು ಶೇ 68.73 ಬಾಲಕರು ಶೇ 54.77 ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಒಟ್ಟಾರೆ ಶೇ 61.73 ಫಲಿತಾಂಶ ಇತ್ತು.

ರಾಜ್ಯದಲ್ಲಿ ತೇರ್ಗಡೆ ಹೊಂದಿದ ಒಟ್ಟಾರೆ ಹುಡುಗರ ಸಂಖ್ಯೆ ಶೇಕಡಾ 54.77. ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶ ಕಳುಹಿಸಲಾಗಿದೆ. ಅಲ್ಲದೆ ಇಲಾಖೆಯ ವೆಬ್ ಸೈಟ್ http://karresults.nic.in ನಲ್ಲಿ ಪ್ರಕಟಿಸಲಾಗಿದೆ.

ಮೊದಲ ಸ್ಥಾನದಲ್ಲಿ ಉಡುಪಿ, ಎರಡನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಮತ್ತು ಮೂರನೇ ಸ್ಥಾನದಲ್ಲಿ ಕೊಡಗು ಜಿಲ್ಲೆಗಳಿವೆ. 56.08 ಶೇಕಡಾದೊಂದಿಗೆ ಚಿತ್ರದುರ್ಗ, ರಾಯಚೂರು ಶೇಕಡಾ 56.23 ಶೇಕಡಾದೊಂದಿಗೆ ಮತ್ತು ವಿಜಯಪುರ 54.22 ಶೇಕಡಾದೊಂದಿಗೆ ಕೊನೆಯ ಮೂರು ಸ್ಥಾನಗಳಲ್ಲಿವೆ.


Spread the love