ದ್ವಿತೀಯ ಪಿಯುಸಿ ಫಲಿತಾಂಶ; ದ.ಕ ಜಿಲ್ಲೆಯ ಇಬ್ಬರು ರಾಜ್ಯಕ್ಕೆ ಪ್ರಥಮ
ಮಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ದ.ಕ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಮಂಗಳೂರು ಕೊಡಿಯಾಲ್ ಬೈಲ್ ಎಕ್ಸ್ ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ಅವರು 600 ಕ್ಕೆ 599 ಅಂಕ ಗಳಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಕೆನರಾ ಪಿಯು ಕಾಲೇಜು ವಿದ್ಯಾರ್ಥಿನಿ ದೀಪಶ್ರೀ ಅವರು 600 ಕ್ಕೆ 599 ಅಂಕ ಗಳಿಸಿದ್ದಾರೆ.