Home Mangalorean News Kannada News ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ

Spread the love

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ   ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ.

ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದೆ. ಶೇ 97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಶೇ 96.80 ರಷ್ಟು ಮಂದಿ ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಶೇ 94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ 3ನೇ ಸ್ಥಾನದಲ್ಲಿದೆ. ಫಲಿತಾಂಶದಲ್ಲಿ ಗದಗ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.

ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಪಿಯುಸಿ ಕಲಾ ವಿಭಾಗದಲ್ಲಿ ಇಬ್ಬರು ಟಾಪರ್​ಗಳಾಗಿದ್ದಾರೆ. ಕಲಾ ವಿಭಾಗದಲ್ಲಿ ಮೇಧಾ ಡಿ. ಟಾಪರ್ 600ಕ್ಕೆ 596 ಅಂಕಗಳನ್ನು ಪಡೆದರೆ, ವಿಜಯಪುರದ ವೇದಾಂತ್ ಕೂಡ 600ಕ್ಕೆ 596 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ 600ಕ್ಕೆ 597 ಅಂಕ ಪಡೆದು ಟಾಪರ್ ಆಗಿದ್ದಾರೆ.

2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

11 ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

ಕಳೆದ ವರ್ಷದ, ಅಂದರೆ 2023 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದರು. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರ ಪೈಕಿ ಶೇಕಡಾ 80.25 ರಷ್ಟು ಉತ್ತೀರ್ಣರಾಗಿದ್ದರೆ, ವಿದ್ಯಾರ್ಥಿಗಳ ಪೈಕಿ ಶೇಕಡಾ 69.05 ರಷ್ಟು ಮಂದಿ ಉತ್ತೀರ್ಣರಾಗಿದ್ದರು. ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇಕಡಾ 74.67 ರಷ್ಟಿತ್ತು. ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.


Spread the love

Exit mobile version