ದ.ಕ.ಜಿಲ್ಲಾಡಳಿತದಿಂದ ವಾಲ್ಮೀಕಿ ಜಯಂತಿ ಆಚರಣೆ
ಮಂಗಳೂರು: ದ.ಕ.ಜಿಲ್ಲಾಡಳಿತ, ಜಿಪಂ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲಾಧಿಕಾರಿಯ ಕಚೇರಿ ಯಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಅವರು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಬಸವರಾಜು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಅಡಿಗ, ಮಂಗಳೂರು ದಕ್ಷಿಣ ಬಿಇಒ ಈಶ್ವರ್ ಮತ್ತಿತರರು ಉಪಸ್ಥಿತರಿದ್ದರು.