Home Mangalorean News Kannada News ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ’ಜನಧ್ವನಿ’ ಧರಣಿ ಸತ್ಯಾಗ್ರಹ

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ’ಜನಧ್ವನಿ’ ಧರಣಿ ಸತ್ಯಾಗ್ರಹ

Spread the love

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ’ಜನಧ್ವನಿ’ ಧರಣಿ ಸತ್ಯಾಗ್ರಹ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಉಳ್ಳಾಲ, ಗುರುಪುರು, ಸುರತ್ಕಲ್, ಮಂಗಳೂರು ನಗರ ಮತ್ತು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಹಕಾರದೊಂದಿಗೆ ದಿವಂಗತರಾದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ರವರ ಜನ್ಮದಿನಾಚರಣೆ ಕಾರ್ಯಕ್ರಮ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ “ಜನಧ್ವನಿ” ಧರಣಿ ಸತ್ಯಾಗ್ರಹ ನಗರದ ಕುದ್ಮುಲ್ ರಂಗರಾವ್ ಪುರಭವನದ ಎದುರು ನಡೆಯಿತು.

ಧರಣಿ ಬಳಿಕ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಯು.ಟಿ.ಖಾದರ್, ಮಾಜಿ ಶಾಸಕ ಮೊಯ್ದೀನ್ ಬಾವಾ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ್ ಉಳ್ಳಾಲ್, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಬಿ ಕಂಬಳಿ, ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಅಬ್ದುಲ್ ಸಲೀಂ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಶೆಟ್ಟಿ, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷ ಮಲಾರ್ ಮೋನು, ಎಐಸಿಸಿ ಸದಸ್ಯೆ ಕವಿತಾ ಸನಿಲ್, ಕೃಪಾ ಆಳ್ವ, ಮನಪಾ, ತಾಲೂಕು-ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.


Spread the love

Exit mobile version