ದ.ಕ. ಜಿಲ್ಲಾ ಮಟ್ಟದ ಮಟ್ಟದ ದಸರಾ ಕ್ರೀಡೋತ್ಸವ

Spread the love

ದ.ಕ. ಜಿಲ್ಲಾ ಮಟ್ಟದ ಮಟ್ಟದ ದಸರಾ ಕ್ರೀಡೋತ್ಸವ

ಮಂಗಳೂರು:  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 2018-19ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡೋತ್ಸವವನ್ನು ಅಕ್ಟೋಬರ್ 8 ರಂದು ಮಂಗಳೂರು ನಗರದ ಮಂಗಳ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಹಾಗೂ ಜಿಲ್ಲಾ ಯುವಜನ ಒಕ್ಕೂಟ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸಂಘಟಿಸಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಮಟ್ಟದ ದಸರಾ ಕ್ರೀಡೋತ್ಸವದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಥಮ, ದ್ವಿತೀಯ ಸ್ಥಾನ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಈ ಕ್ರೀಡೋತ್ಸವದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.

ದಸರಾ ಕ್ರೀಡೋತ್ಸವದ ಶಟಲ್ ಬ್ಯಾಡ್ಮಿಂಟನ್, ಹ್ಯಾಂಡ್‍ಬಾಲ್, ಹಾಕಿ, ಬಾಸ್ಕೆಟ್‍ಬಾಲ್, ಟೆನ್ನಿಸ್, ನೆಟ್‍ಬಾಲ್ ಹಾಗೂ ಟೇಬಲ್ ಟೆನ್ನಿಸ್ ಕ್ರೀಡೆಗಳನ್ನು ಪುರುಷರಿಗೆ ಮತ್ತು ಮಹಿಳೆಯರಿಗೆ ನೇರವಾಗಿ ಜಿಲ್ಲಾ ಮಟ್ಟದಲ್ಲಿ ನಡೆಸಲಾಗುವುದು. ಸದರಿ ಕ್ರೀಡೋತ್ಸವದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಅಕ್ಟೋಬರ್ 8 ರಂದು ಪೂರ್ವಾಹ್ನ 9 ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ. ಜಿಲ್ಲೆ, ಮಂಗಳೂರು ( ದೂ: 0824-2451264) ಇವರನ್ನು ಸಂಪರ್ಕಿಸಲು ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.


Spread the love