ದ.ಕ.ಜಿಲ್ಲಾ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣರವರ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ಹಸ್ತಾಂತರ

Spread the love

ದ.ಕ.ಜಿಲ್ಲಾ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣರವರ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ಹಸ್ತಾಂತರ

ಮಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ಕುಟುಂಬಗಳಿಗೆ ದ.ಕ.ಜಿಲ್ಲಾ ಯುವ ಜನತಾದಳ ಜಿಲ್ಲಾಧ್ಯಕ್ಷರಾದ ಅಕ್ಷಿತ್ ಸುವರ್ಣರವರ ನೇತೃತ್ವದಲ್ಲಿ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು.

ಈ ವೇಳೆ ಮಾತನಾಡಿದ ಅಕ್ಷಿತ್ ಸುವರ್ಣ ಕೊರೊನಾ ಲಾಕ್ಡೌನ್ನಿಂದಾಗಿ ದಿನಗೂಲಿ ಕಾರ್ಮಿಕರು, ಮಧ್ಯಮ ವರ್ಗದ ಕಾರ್ಮಿಕರ ಕುಟುಂಬ ಆಹಾರ ವ್ಯವಸ್ಥೆ ಇಲ್ಲದೆ ಸಂಕಷ್ಟದಲ್ಲಿದೆ. ಇದನ್ನು ಮನಗಂಡು ಅರ್ಹ ಫಲಾನುಭವಿಗಳಿಗೆ ದಿನಬಳಕೆ ದಿನಸಿ ಸಾಮಾಗ್ರಿಗಳನ್ನು ದಕ ಜಿಲ್ಲಾ ಯುವ ಜನತಾದಳದ ವತಿಯಿಂದ ವಿತರಿಸಲು ನಿರ್ಧರಿಸಲಾಗಿದೆ ಎಂದರು.

ಈ ವೇಳೆ ಯುವ ಜನತಾದಳದ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love