Home Mangalorean News Kannada News ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡೆಸುವ ಸಂಘಟನೆಗಳ ಪ್ರಯತ್ನ ವಿಫಲವಾಗಲಿದೆ ; ಸಿದ್ದರಾಮಯ್ಯ

ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡೆಸುವ ಸಂಘಟನೆಗಳ ಪ್ರಯತ್ನ ವಿಫಲವಾಗಲಿದೆ ; ಸಿದ್ದರಾಮಯ್ಯ

Spread the love

ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡೆಸುವ ಸಂಘಟನೆಗಳ ಪ್ರಯತ್ನ ವಿಫಲವಾಗಲಿದೆ ; ಸಿದ್ದರಾಮಯ್ಯ

ಮಂಗಳೂರು: ಕಾನೂನು ಸುವ್ಯವಸ್ಥೆ ಹದಗೆಡೆಸುವ ಪ್ರಯತ್ನವನ್ನು ಕೆಲ ಸಂಘಟನೆಗಳು ಮಾಡುತ್ತಿವೆ. ಅವರ ಪ್ರಯತ್ನ ಫಲಿಸಲ್ಲ. ಅಂತಹ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಹೊರವಲಯದ ಅಡ್ಯಾರ್ ಗಾರ್ಡನ್‌ನಲ್ಲಿ ಶುಕ್ರವಾರ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳು ಮತ್ತು ವಿವಿಧ ಚುನಾವಣೆಗಳಲ್ಲಿ ಸೋತ ಅಭ್ಯರ್ಥಿಗಳ ಸಮಾವೇಶ ಆರಂಭಕ್ಕೂ ಮುನ್ನ ಸುದ್ದಿಗಾರರ ಜತೆ ಅವರು ಮಾತನಾಡಿದರು.

ದಕ ಜಿಲ್ಲೆಯಲ್ಲಿ ಕೆಲವು ದಿನಗಳಿಂದೀಚೆಗೆ ಸಮಾಜಘಾತುಕ ಶಕ್ತಿಗಳು ಕಾನೂನನ್ನು ಕೈಗೆತ್ತಿಕೊಳ್ಳುವ ಪ್ರಯತ್ನ ಮಾಡುತ್ತಿವೆ ಆದರೆ ಸರಕಾರ ಅದಕ್ಕೆ ಅವಕಾಶ ನೀಡುವುದಿಲ್ಲ. ಸಮಾಜಘಾತುಕ ಶಕ್ತಿಗಳ ವಿರುದ್ದ ಬಿಗಿ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತೇವೆ. ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುವ ಸಂಘಟನೆ ಸಫಲತೆ ಕಾಣುವುದಿಲ್ಲ ಎಂದರು.

ಇದೇ ವೇಳೆ ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಈ ವೇಳೆ ಸಚಿವರಾದ ಯು.ಟಿ.ಖಾದರ್, ರಮಾನಾಥ ರೈ, ಶಾಸಕ ಅಭಯಚಂದ್ರ ಜೈನ್, ಐವನ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.


Spread the love

Exit mobile version