ದ.ಕ. ಜಿಲ್ಲೆಯ ಧಾರ್ಮಿಕ ಕೇಂದ್ರಗಳಲ್ಲಿ   ಎಲ್ಲ ಸೇವೆಗಳು ರದ್ದು – ಸಿಂಧೂ ಬಿ ರೂಪೇಶ್

Spread the love

ದ.ಕ. ಜಿಲ್ಲೆಯ ಧಾರ್ಮಿಕ ಕೇಂದ್ರಗಳಲ್ಲಿ   ಎಲ್ಲ ಸೇವೆಗಳು ರದ್ದು – ಸಿಂಧೂ ಬಿ ರೂಪೇಶ್

ಮಂಗಳೂರು : ದ.ಕ. ಜಿಲ್ಲೆಯ ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ಇಂದಿನಿಂದ ಎಲ್ಲಾ ಸೇವೆಗಳನ್ನು ರದ್ದುಗೊಳಿಸಲಾಗುವುದು. ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಇರುತ್ತದೆ ಎಂದು   ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಘೋಷಿಸಿದ್ದಾರೆ.

ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ ನಡೆಯುವ ಉತ್ಸವ/ಜಾತ್ರೆಗಳಲ್ಲಿ ಕೇವಲ ದೇವಸ್ಥಾನಗಳ ಸಿಬಂದಿ ಮಾತ್ರ ಭಾಗವಹಿಸುವಂತೆ ಸೂಚಿಸಿದ್ದು, ಉತ್ಸವಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿದೆ.

ದೇವಸ್ಥಾನಗಳಲ್ಲಿ ಕೇವಲ ದೇವರ ದರ್ಶನವನ್ನು ಹೊರತು ಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ರದ್ದುಪಡಿಸಿದೆ ಹಾಗೂದೇವಸ್ಥಾನಗಳಿಗೆ ಬರುವ ಸಾರ್ವಜನಿಕರಿಗೆ ತಂಗಲು ಅವಕಾಶ ಇರುವುದಿಲ್ಲ. ದೇವಸ್ಥಾನ, ಮಸೀದಿ, ಚರ್ಚ್ ಒಳಗೊಂಡಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಗುಂಪು ಗುಂಪಾಗಿ ಸಾರ್ವಜನಿಕರು ಪ್ರವೇಶಿಸಬಾರದು ಎಂದು ಸೂಚಿಸಲಾಗಿದೆ. ಬೇಸಿಗೆ ಶಿಬಿರ, ಸಮಾರಂಭಗಳು, ವಿಚಾರ ಸಂಕೀರ್ಣಗಳು ಮತ್ತಿತರ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸದಂತೆ ಆದೇಶಿಸಲಾಗಿದೆ. ಬೀಚ್ ಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧೀಸಿದ್ದು, ಮದುವೆ ಸಮಾರಂಭಗಳನ್ನು ಹೆಚ್ಚಿನ ಜನಸಂದಣಿ ಸೇರದಂತೆ ಸರಳವಾಗಿ ಆಯೋಜಿಸಲು ಸೂಚಿಸಲಾಗಿದೆ.

ಪಿಜಿ ಮತ್ತು ವಸತಿ ನಿಲಯಗಳಲ್ಲಿ ವಾಸಿಸುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ತಮ್ಮ ಶಿಕ್ಷಣ ಸಂಸ್ಥೆಗಳು ಕೋವಿಡ್ -19 ಹಿನ್ನಲೆಯಲ್ಲಿ ರಜೆ ಘೋಷಿಸಿದ್ದಲ್ಲಿ ತಮ್ಮ ತಮ್ಮ ಮನೆಗಳಿಗೆ ವಾಪಾಸು ಹೋಗಲು ಸೂಚಿಸಬೇಕು. ಒಂದು ವೇಳೆ ಯಾರಾದರೂ ಪಿಜಿ ಮತ್ತು ವಸತಿ ನಿಲಯಗಳಲ್ಲಿ ಉಳಿದುಕೊಳ್ಳು ಬಯಸಿದ್ದಲ್ಲಿ ಅಂತಹವರಿಗೆ ಪಿಜಿ ಹಾಗೂ ವಸತಿ ನಿಲಯಗಳ ಮಾಲಿಕರು ವ್ಯವಸ್ಥಾಪಕರು ಕರ್ನಾಟಕ ಸರಕಾರವು ನೀಡಿರುವ ಸಲಹೆಗಳಂತೆ ವೈಯುಕ್ತಿಕ ಸ್ವಚ್ಛತೆಗಳ ಬಗ್ಗೆ ಮನವರಿಕೆ ಮಾಡಿಕೊಡತಕ್ಕದ್ದು. ನಿಯತಕಾಲಿಕವಾಗಿ ಪಿಜಿ ವಸತಿ ನಿಲಯಗಳಿಗೆ ನೈರ್ಮಲ್ಯತೆ ಹಾಗೂ ಸ್ವಚ್ಚತೆಯನ್ನು ಕಾಪಾಡುವುದು ಪಿಜಿ ವಸತಿ ನಿಲಯಗಳ ಮಾಲಿಕರ ವ್ಯವಸ್ಥಾಪಕರ ಜವಾಬ್ದಾರಿಯಾಗಿರುತ್ತದೆ.

ಪಿಜಿ ವಸತಿ ನಿಲಯಗಳಲ್ಲಿ ವಾಸಿಸುವವರಿಗೆ ಅನಾನುಕೂಲವಾಗದಂತೆ ಹಾಗೂ ಯಾವುದೇ ಸೋಂಕು ಹರಡಂತೆ ಕೋಣೆಗಳಲ್ಲಿ ಜನದಡ್ಡಣೆಯನ್ನು ಕಡ್ಡಾಯವಾಗಿ ನಿರ್ಬಂಧಿಸಿದೆ. ಪಿಜಿ ವಸತಿ ನಿಲಯಗಳ ಆವರಣಗಳಲ್ಲಿ ನೈರ್ಮಲ್ಯತೆ ಹಾಗೂ ಸ್ವಚ್ಚತೆಯನ್ನು ಕಾಪಾಡಲು ನೀಡಲಾದ ನಿರ್ದೇಶನಗಳನ್ನು ಅನುಸರಿಸದೇ ಕೋವಿಡ್ -19 ಹರಡಲು ಕಾರಣಿಕರ್ತರಾದವರ ವಿರುದ್ಧ ಕಠಣ ಕ್ರಮಗಳನ್ನು ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love