ಧರ್ಮಸ್ಥಳದಲ್ಲಿ ಮಾಜಿ ಸಿ.ಎಂ. ಸಿದ್ದರಾಮಯ್ಯ : ಸರ್ಕಾರ ಉರುಳಿಸಿದ್ದೇ ಬಿ.ಜೆ.ಪಿ. ಮತ್ತು ದೇವೇಗೌಡ

Spread the love

ಧರ್ಮಸ್ಥಳದಲ್ಲಿ ಮಾಜಿ ಸಿ.ಎಂ. ಸಿದ್ದರಾಮಯ್ಯ : ಸರ್ಕಾರ ಉರುಳಿಸಿದ್ದೇ ಬಿ.ಜೆ.ಪಿ. ಮತ್ತು ದೇವೇಗೌಡ

ಉಜಿರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರ್ಲಾನಿ, ಅನಾರು ಮತ್ತು ಹೊಸ್ಮಠಕ್ಕೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ಇದಕ್ಕೆ ಮೊದಲು ಬೆಳ್ತಂಗಡಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಬಳಿಕ ಧರ್ಮಸ್ಥಕ್ಕೆ ಬಂದು ದೇವರ ದರ್ಶನ ಪಡೆದರು. ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಅವರನ್ನು ಸ್ವಾಗತಿಸಿದರು.

ಬಳಿಕ ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಬಿ.ಜೆ.ಪಿಯವರು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಮಾಡುವುದಿಲ್ಲ. ಕುಣಿಯಲು ಬಾರದವರು ರಂಗಸ್ಥಳ ಸರಿ ಇಲ್ಲ ಅಂದತೆ ಅವರು ಯಾವ ಕೆಲಸವನ್ನೂ ಸುಸೂತ್ರವಾಗಿ ಮಾಡುವುದಿಲ್ಲ. ಸರ್ಕಾರ ಉರುಳಿಸಿದ್ದೆ ಬಿ.ಜೆ.ಪಿ.ಯವರು ಮತ್ತು ದೇವೇ ಗೌಡರು ಎಂದು ನೇರ ಆರೋಪ ಮಾಡಿದರು.

ಪ್ರಧಾನಿ ರಾಜ್ಯಕ್ಕೆ ಬರಲಿಲ್ಲ ಹಾಗೂ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಪರಿಹಾರವನ್ನೂ ಬಿಡುಗಡೆ ಮಾಡಿಲ್ಲ ಎಂದು ಸಿದ್ದರಾಮಯ್ಯ ತೀವ್ರ ಅಸಮಾಧಾನ ಮತ್ತು ಅಕ್ರೋಶ ವ್ಯಕ್ತಪಡಿಸಿದರು.

ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಭೋಜನ ಸ್ವೀಕರಿಸಿ ಮಂಗಳೂರಿಗೆ ಪ್ರಯಾಣ ಮುಂದುವರಿಸಿದರು.

ಮಾಜಿ ಸಚಿವ ಯು.ಟಿ. ಖಾದರ್, ಅಭಯಚಂದ್ರ ಜೈನ್ ಮತ್ತು ಬಿ. ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಜೊತೆಗಿದ್ದರು.


Spread the love