Home Mangalorean News Kannada News ಧರ್ಮಸ್ಥಳ : ಯೋಗ ದಿನಾಚರಣೆ – ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ : ಯೋಗ ದಿನಾಚರಣೆ – ಸ್ವಚ್ಛತಾ ಕಾರ್ಯಕ್ರಮ

Spread the love

ಧರ್ಮಸ್ಥಳ : ಯೋಗ ದಿನಾಚರಣೆ – ಸ್ವಚ್ಛತಾ ಕಾರ್ಯಕ್ರಮ

ಮಂಗಳೂರು : ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಯೋಗ ದಿನಾಚರಣೆಯನ್ನು ಆಯೋಜಿಸಲಾಯಿತು.

ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಒಂದು ಸಾವಿರ ಶಿಬಿರಾರ್ಥಿಗಳಿಂದ ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆ ನಡೆಯಿತು. ಎಸ್.ಡಿ.ಎಂ.ಕಾಲೇಜಿನ ‌ರಾಷ್ಟ್ರೀಯ ಸೇವಾಯೋಜನೆಯ ಪ್ರತಿನಿಧಿಗಳು, ಎಸ್.ಡಿ.ಎಂ .ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳು ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ರಾಜ್ಯ ಸಣ್ಣನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ಅವರು ಉದ್ಘಾಟಿಸಿದರು . ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಸಭೆಯ ಅಧ್ಯಕ್ಷ ತೆ ವಹಿಸಿದ್ದರು.

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ, ಮಾಜಿ ಶಾಸಕ ಅಭಯಚಂದ್ರ ಜೈನ್‌ , ಶ್ರೀಮತಿ ಹೇಮಾವತಿ ಡಿ .ಹೆಗ್ಗಡೆ , ಎಸ್.ಡಿ.ಎಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಯೋಗ ಕಾರ್ಯಕ್ರಮದ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶಾಂತಿವನ ಪರಿಸರದಲ್ಲಿ ಯೋಗಪ್ರತಿನಿಧಿಗಳಿಂದ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.


Spread the love

Exit mobile version