ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ವೀಡಿಯೋ ಮಾಡಿದ ಆರೋಪ – ನಾಲ್ವರ ಬಂಧನ
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ಇರುವ ಧಾರ್ಮಿಕ ಸ್ಥಳದಲ್ಲಿ ಧಾರ್ಮಿಕ ನಂಬಿಕೆಗೆ ಘಾಸಿಯಾಗುವಂತ ಕೃತ್ಯವೆಸಗಿ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿರುವ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಜೀಪನಡು ಗ್ರಾಮ ನಿವಾಸಿಗಳಾದ ಮಸೂದ್(20), ಅಝೀಮ್(20), ಅಬ್ದುಲ್ ಲತೀಫ್(20) ಮತ್ತು ಅರ್ಫಾಝ್ (20) ಬಂಧಿತ ಆರೋಪಿಗಳು.
ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕಲಂ 295 [ಎ], 297, 427 ಜೊತೆಗೆ 34 ಐ.ಪಿ.ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತ್ವರಿತವಾಗಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.