ನಂತೂರು ಬಳಿ ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸಾವು

Spread the love

ನಂತೂರು ಬಳಿ ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸಾವು

ಮಂಗಳೂರು: ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸಾವಿಗೀಡಾದ ಘಟನೆ ಇಂದು ಬೆಳಿಗ್ಗೆ ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಶಿವಾನಂದ ಎಂದು ಗುರುತಿಸಲಾಗಿದೆ

ನಂತೂರು ಪದವು ರಸ್ತೆಯಾಗಿ ಹೋಗುತ್ತಿದ್ದ ದ್ವಿಚಕ್ರ ವಾಹನವು ಸವಾರನ ನಿಯಂತ್ರಣ ತಪ್ಪಿ ಉರುಳಿದ್ದು, ಹಿಂದಿನಿಂದ ಚಲಿಸುತ್ತಿದ್ದ ಟ್ಯಾಂಕರ್ ಸವಾರನ ಮೇಲೆ ಹರಿದಿದ್ದು ಇದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ.

ಸಂಚಾರ ಪೊಲೀಸರು ತನಿಖೆ ನಡೆಸುತ್ತಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love