ನಂದಿನಿ ಹಾಲಿನ ದರ ಲೀಟರ್‌ಗೆ 4 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

Spread the love

ನಂದಿನಿ ಹಾಲಿನ ದರ ಲೀಟರ್‌ಗೆ 4 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು : ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಹಾಗೂ ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಏರಿಕೆ ಕುರಿತು ಮುಂದಿಟ್ಟ ಪ್ರಸ್ತಾವನೆಗೆ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದ್ದು, ಪ್ರತಿ ಲೀಟರ್ ಹಾಲಿಗೆ 4 ರೂ. ಗಳನ್ನು ಹೆಚ್ಚಿಸಿದೆ.

ಈ ಕುರಿತು ಮಾ.24 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರಕಾರಿ ನಿವಾಸ ಕಾವೇರಿಯಲ್ಲಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಅಧ್ಯಕ್ಷ, ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದ್ದರು.

ಇದೀಗ ಪ್ರತಿ ಲೀಟರ್ ನಂದಿನಿ ಹಾಲಿನ ದರವನ್ನು 4 ರೂ. ಗೆ ಹೆಚ್ಚಳ ಮಾಡಲಾಗಿದೆ.


Spread the love
Subscribe
Notify of

0 Comments
Inline Feedbacks
View all comments