Home Mangalorean News Kannada News ನಂದಿನಿ ಹಾಲಿನ ದರ ಹೆಚ್ಚಳ; ನಾಳೆಯಿಂದಲೇ ಜಾರಿ

ನಂದಿನಿ ಹಾಲಿನ ದರ ಹೆಚ್ಚಳ; ನಾಳೆಯಿಂದಲೇ ಜಾರಿ

Spread the love

ನಂದಿನಿ ಹಾಲಿನ ದರ ಹೆಚ್ಚಳ; ನಾಳೆಯಿಂದಲೇ ಜಾರಿ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ(ಕೆಎಂಎಫ್)ವು ನಂದಿನಿ ಹಾಲಿನ ದರ ಹೆಚ್ಚಳ ಮಾಡಿದೆ.

ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಕೆಎಂಎಫ್ ಮುಖ್ಯ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.

ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್ ಗೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು.

ಸದ್ಯ ಲೀಟರ್ ಹಾಲಿಗೆ ಇರುವ 42 ರೂ. ಇರುವ ದರವನ್ನು 2 ರೂ. ಹೆಚ್ಚಳ ಮಾಡಲಾಗುವುದು. ಜೂ.26ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ ಎಂದು ಭೀಮಾನಾಯ್ಕ್ ತಿಳಿಸಿದರು.

ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರೂ. ಇದೆ. ಗುಜರಾತ್ ನಲ್ಲಿ ಅಮುಲ್ ಒಂದು ಲೀಟರ್ ಗೆ 56 ರೂ. ಮಹಾರಾಷ್ಟ್ರದಲ್ಲಿ 56 ರೂ. ದಿಲ್ಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಎಂದು ಭೀಮಾ ನಾಯ್ಕ್ ಹೇಳಿದರು.


Spread the love

Exit mobile version