ನಕ್ಸಲರಿಗೆ ಶರಣಾಗತಿ ಪ್ಯಾಕೇಜ್: ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ : ಸುನಿಲ್‌ ಕುಮಾರ್‌

Spread the love

ನಕ್ಸಲರಿಗೆ ಶರಣಾಗತಿ ಪ್ಯಾಕೇಜ್: ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ : ಸುನಿಲ್‌ ಕುಮಾರ್‌

ಬೆಂಗಳೂರು: “ಆರು ಮಂದಿ ನಕ್ಸಲರಿಗೆ ರಾಜ್ಯ ಸರಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ” ಎಂದು ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಹೇಳಿದ್ದಾರೆ.

ಈ ಕುರಿತು ಬುಧವಾರ ಸಾಮಾಜಿಕ ಜಾಲತಾಣ ʼಎಕ್ಸ್‌ʼ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ʼಯಾವ ಮಾನದಂಡದ ಮೇಲೆ ಸರಕಾರ ಈ ಕ್ರಮಕ್ಕೆ ಮುಂದಾಗಿದೆ? ಎಂಬುದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ.ಅವರಿಗೆ ಕ್ಷಮೆ,ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ! ʼ ಎಂದು ಟೀಕಿಸಿದ್ದಾರೆ.

ʼರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿ ಆಗಿದ್ದ ತಣ್ಣಗಿನ ಮಲೆನಾಡಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ?. ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆʼ ಎಂದು ಹೇಳಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments