ನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಷೇಧ

Spread the love

ಮ0ಗಳೂರು: ಭಾರತ ಸರಕಾರದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವಾಲಯ ಇವರ ಅಧಿಸೂಚನೆ ಸಂಖ್ಯೆ: ಅಪಜೀ/17/ ಇಪಿಸಿ/2012, ಬೆಂಗಳೂರು, ದಿನಾಂಕ: 11-03-2016 ರಂತೆ ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ ಹಾಗೂ ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟು ಮಾಡುತ್ತಿರುವ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್ಸ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೊಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್‍ನಿಂದ ತಯಾರಾದಂತಹ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಿರ್ದೇಶನವನ್ನು ಹೊರಡಿಸಿದೆ.
ಯಾವುದೇ ವ್ಯಕ್ತಿ, ಅಂಗಡಿ ಮಾಲೀಕ, ಮಾರಾಟಗಾರ, ಸಗಟು ಮಾರಾಟಗಾರ ಅಥವಾ ಚಿಲ್ಲರೆ ವ್ಯಾಪಾರಿ, ವ್ಯಾಪಾರಿ ಮತ್ತು ಮಾರಾಟಗಾರರು, ಯಾವುದೇ ದಪ್ಪದ ಯಾವುದೇ ರೀತಿಯ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್ಸ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೊಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್‍ನಿಂದ ತಯಾರಾದಂತಹ ವಸ್ತುಗಳ ಬಳಕೆಯನ್ನು ರಾಜ್ಯದಾದ್ಯಂತ ನಿಷೇಧಿಸಲಾಗಿದೆ. ಮುಂದುವರೆದು, ಯಾವುದೇ ಕೈಗಾರಿಕೆ ಅಥವಾ ವ್ಯಕ್ತಿ ಯಾವುದೇ ದಪ್ಪದ ಯಾವುದೇ ರೀತಿಯ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್ಸ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೊಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್‍ನಿಂದ ತಯಾರಾದಂತಹ ವಸ್ತುಗಳ ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಾಣಿಕೆ, ಮಾರಾಟ ಮತ್ತು ವಿತರಣೆ ಮಾಡುವುದನ್ನು ನಿಷೇಧಿಸಿದೆ.
ಆದುದರಿಂದ, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇದಿಸಿದೆ. ಪರಿಶೀಲನೆ ಸಮಯದಲ್ಲಿ ಯಾವುದು ಅಂತಹ ಪ್ರಕರಣವು ಕಂಡು ಬಂದಲ್ಲಿ ಯಾವುದೇ ಮುನ್ಸೂಚನೆ ನೀಡದೆ, ಎಲ್ಲಾ ನಿಷೇಧಿತ ವಸ್ತುಗಳನ್ನು ನಾಶಪಡಿಸಿಕೊಂಡು ಮುಂದಿನ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರ ಪ್ರಕಟಣೆ ತಿಳಿಸಿದೆ.


Spread the love