ನಗರ ಪಾಲಿಕೆ ಚುನಾವಣೆ – ನ.10 ರಂದು ಬೆ.7 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯ
ಮಂಗಳೂರು : ನಗರ ಸ್ಥಳೀಯ ಸಾರ್ವತ್ರಿಕ ಮತ್ತು ಉಪ ಚುನಾವಣೆ 2019ನ್ನು ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ಹಾಗೂ ಬಹಿರಂಗ ಪ್ರಚಾರವನ್ನು ಮುಕ್ತಾಯಗೊಳಿಸಲು ಎಲ್ಲಾ ಅಗತ್ಯ ಕೃಮಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಚುನಾವಣಾ ಪ್ರಚಾರವು ಮತದಾನ ಪ್ರಾರಂಭವಾಗುವ 48 ಗಂಟೆಗಳ ಮುಂಚೆ ಮುಕ್ತಾಯವಾಗಬೇಕಾಗಿರುತ್ತದೆ. ಅಂದರೆ ನವೆಂಬರ್ 10 ರಂದು ಬೆಳಿಗ್ಗೆ 7 ಗಂಟೆ ನಂತರ ರಾಜಕೀಯ ಪಕ್ಷಗಳು, ಚುನಾವಣೆಗೆ ಸ್ಫರ್ಧಿಸಿರುವ ಅಭ್ಯರ್ಥಿಗಳು ಹಾಗೂ ಅಭ್ಯರ್ಥಿಗಳ ಪರವಾಗಿ ಯಾರೇ ಇತರರು ಯಾವುದೇ ವಿಧದಲ್ಲಿ ಬಹಿರಂಗ ಚುನಾವಣಾ ಪ್ರಚಾರವನ್ನು ನಡೆಸಬಾರದು.
ನವೆಂಬರ್ 10 ಬೆಳಿಗ್ಗೆ 7 ಗಂಟೆಯ ಒಳಗೆ ಚುನಾವಣೆಗೆ ಸ್ಫರ್ಧಿಸಿರುವ ಅಭ್ಯರ್ಥಿಗಳ ಬೆಂಬಲಕ್ಕಾಗಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಹೊರಗಿನಿಂದ ಚುನಾವಣಾಪ್ರಚಾರಕ್ಕಾಗಿ ತಾರಾ ಪ್ರಚಾರಕರು ಮತ್ತು ಇತರೆ ವ್ಯಕ್ತಿಗಳನ್ನು ಕರೆಯಿಸಿಕೊಂಡಿದ್ದಲ್ಲಿ ಅಂತಹ ವ್ಯಕ್ತಿಗಳು ಚುನಾವಣೆ ನಡೆಯುತ್ತಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯನ್ನು ಕಡ್ಡಾಯವಾಗಿ ಬಿಡಬೇಕು ಎಂದು ಜಿಲ್ಲಾ ಚುನಾವಣೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ