ನಾಳೆ (ಎ. 8) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಲ್ಲಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ನಾಳೆ(ಎ.8) ಮಧ್ಯಾಹ್ನ 12:30ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸುತ್ತಿದ್ದು, https://karresults.nic.in ಜಾಲತಾಣದಲ್ಲಿ ಮಧ್ಯಾಹ್ನ 1:30 ಗಂಟೆಯ ನಂತರ ಫಲಿತಾಂಶ ವೀಕ್ಷಿಸಬಹುದಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾ.1ರಿಂದ ಮಾ.20ರ ವರೆಗೆ ನಡೆಸಲಾಗಿತ್ತು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೋಮವಾರದಂದು ಪ್ರಕಟನೆಯಲ್ಲಿ ತಿಳಿಸಿದೆ.