Home Mangalorean News Kannada News ನಿಗಮ-ಮಂಡಳಿಗಳಿಗೆ ಅಧ್ಯಕರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ

ನಿಗಮ-ಮಂಡಳಿಗಳಿಗೆ ಅಧ್ಯಕರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ

Spread the love

ನಿಗಮ-ಮಂಡಳಿಗಳಿಗೆ ಅಧ್ಯಕರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ 

ಬೆಂಗಳೂರು: 91 ನಿಗಮ-ಮಂಡಳಿಗಳಿಗೆ ಅಧ್ಯಕರನ್ನು ನೇಮಕ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪಟ್ಟಿಯಲ್ಲಿ 21 ಶಾಸಕರು ಸ್ಥಾನ ಪಡೆದಿದ್ದು, 70 ಕಾರ್ಯಕರ್ತರು ಮತ್ತು ಮುಖಂಡರಿಗೆ ಅಧ್ಯಕ್ಷ ಸ್ಥಾನ ಲಭಿಸಿದೆ. ನೇಮಕ ಆದೇಶ ಪತ್ರಗಳು ಆಯಾ ಇಲಾಖೆಗಳ ಮೂಲಕ ರವಾನೆ ಆಗಲಿವೆ. ಅಧಿಕಾರ ವಹಿಸಿಕೊಂಡ ದಿನದಿಂದ ಜಾರಿಗೆ ಬರುವಂತೆ ಅಧ್ಯಕ್ಷರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಪ್ರೊ.ಸಿದ್ದರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ.

ಅಧ್ಯಕ್ಷ ಸ್ಥಾನ ಪಡೆದಿರುವ ಶಾಸಕರ ಪಟ್ಟಿ

* ಮಾಲಿಕಯ್ಯ ವೆಂಕಯ್ಯ ಗುತ್ತೇದಾರ, ಕರ್ನಾಟಕ ಗೃಹ ಮಂಡಳಿ
* ಆರ್‌.ವಿ.ದೇವರಾಜ್‌, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ
* ಕೆ.ವೆಂಕಟೇಶ್‌, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
* ರಾಜಶೇಖರ ಬಿ.ಪಾಟೀಲ, ಕೆ.ಆರ್‌.ಐ.ಡಿ.ಎಲ್‌
* ಎನ್‌.ನಾಗರಾಜ್‌, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ
* ಫಿರೋಜ್‌ ಶೇಠ್‌, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ
* ಕೆ.ಗೋಪಾಲ ಪೂಜಾರಿ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತ

* ಪುಟ್ಟರಂಗಶೆಟ್ಟಿ ಸಿ., ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ

* ರಹೀಂ ಖಾನ್‌, ಕರ್ನಾಟಕ ರಾಜ್ಯ ಉಗ್ರಾಣ ನಿಗಮ
* ಕೆ.ವಸಂತ ಬಂಗೇರ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
* ಬಿ.ಆರ್‌.ಯಾವಗಲ್ಲ, ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ
* ಎಂ.ಕೆ.ಸೋಮಶೇಖರ್‌, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
* ಜಿ.ಎಸ್‌.ಪಾಟೀಲ್‌, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ
* ಶಿವಾನಂದ ಎಸ್‌.ಪಾಟೀಲ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
* ಹಂಪನಗೌಡ ಬಾದರ್ಲಿ, ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್‌ ಲಿಮಿಟೆಡ್‌
* ಹೆಚ್‌.ಆರ್‌.ಅಲಗೂರ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ
* ಡಿ.ಸುಧಾಕರ್‌, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ
* ಬಾಬೂರಾವ್‌ ಚಿಂಚನಸೂರ್‌, ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ
* ಶಾರದಾ ಮೋಹನ್‌ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ
* ಎನ್‌.ವೈ.ಗೋಪಾಲ ಕೃಷ್ಣ, ಸಮಿತಿ ಶಿಫಾರಸುಗಳ ಅನುಷ್ಠಾನ ಸಮಿತಿ
* ಜಿ.ಹಂಪಯ್ಯ ನಾಯಕ್‌ ಬಲ್ಲಟಗಿ, ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ, ತುಂಗಭದ್ರ ಯೋಜನೆ


Spread the love

Exit mobile version