Home Mangalorean News Kannada News ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ – ಮಂಗಳೂರಿನ ಖ್ಯಾತ ಆರ್ಕಿಟೆಕ್ಟ್ ಧರ್ಮರಾಜ್ ಗಂಭೀರ..!

ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ – ಮಂಗಳೂರಿನ ಖ್ಯಾತ ಆರ್ಕಿಟೆಕ್ಟ್ ಧರ್ಮರಾಜ್ ಗಂಭೀರ..!

Spread the love

ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ – ಮಂಗಳೂರಿನ ಖ್ಯಾತ ಆರ್ಕಿಟೆಕ್ಟ್ ಧರ್ಮರಾಜ್ ಗಂಭೀರ..!

ಭಾರೀ ಮಳೆಯಿಂದಾಗಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಆಲೂರು ತಾಲೂಕಿನ ಸಿಂಗಾಪುರ ಬಳಿ ನಡೆದಿದೆ.

ಗಾಯಗೊಂಡವರನ್ನು ಕಾರಿನ ಚಾಲಕ ಮಂಗಳೂರಿನ ಖ್ಯಾತ ಆರ್ಕಿಟೆಕ್ಟ್ ಧರ್ಮರಾಜ್ ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಘಟನೆ ಬಿಜ್ಜನಹಳ್ಳಿ ಕ್ರಾಸ್ ಬಳಿ ನಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಕಾರು ಚಲಾಯಿಸುತ್ತಿದ್ದ ಧರ್ಮರಾಜ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

Exit mobile version