ನಿಯಮ ಮೀರಿದ ಓಟಗಾರರಿಗೆ 2 ಕಂಬಳಕ್ಕೆ ನಿಷೇಧ! ಜಿಲ್ಲಾ ಕಂಬಳ ಸಮಿತಿ ಖಡಕ್ ನಿರ್ಧಾರ ಪ್ರಕಟ
ಮಂಗಳೂರು (ಮೂಡುಬಿದಿರೆ): ಈಗಾಗಲೇ ನಡೆದ ಕಂಬಳಗಳು ವಿಳಂಬವಾಗಿ ಮುಕ್ತಾಯವಾಗಿರುವ ಬಗ್ಗೆ ದೂರುಗಳು ಬಂದಿದ್ದು ಗಂತಿನಲ್ಲಿ ಕೋಣಗಳನ್ನು ಬಿಡುವವರು ಅನಗತ್ಯವಾಗಿ ವಿಳಂಬ ಮಾಡಿದಲ್ಲಿ, ಮಂಜೊಟ್ಟಿ ಮತ್ತು ಗಂತಿನಲ್ಲಿ ಓಟಗಾರರು ಕೋಣಗಳಿಗೆ ಹೊಡೆಯುವುದು ಸಾಬೀತಾದಲ್ಲಿ ಅಂತಹವರನ್ನು ಮುಂದಿನ ಎರಡು ಕಂಬಳಗಳಿಗೆ ನಿಷೇಧಿಸಲು ಜಿಲ್ಲಾ ಕಂಬಳ ಸಮಿತಿ ನಿರ್ಣಯಿಸಿದೆ.
ಒಂಟಿಕಟ್ಟೆ ಸೃಷ್ಟಿ ಗಾರ್ಡನ್‌ನಲ್ಲಿ ಗುರುವಾರ ನಡೆದ ಜಿಲ್ಲಾಕಂಬಳ ಸಮಿತಿಯ ತುರ್ತು ಸಭೆಯಲ್ಲಿ ಈ ಕುರಿತು ನಿರ್ಣಯಿಸಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಿತಿ ಅಧ್ಯಕ್ಷ ಬೆಳಪು ಡಾ.ದೇವಿ ಪ್ರಸಾದ್ ಶೆಟ್ಟಿ, 24 ಗಂಟೆಗಳಲ್ಲಿ ಮುಕ್ತಾಯಗೊಳ್ಳಬೇಕಾಗಿದ್ದ ಕಂಬಳಗಳು ವಿನಾ ಕಾರಣ ವಿಳಂಬಗೊಳ್ಳುತ್ತಿವೆ. ಇದು ಸರಕಾರದ ನಿಯಮಗಳಿಗೆ ವಿರುದ್ಧವಾಗಿದೆ. ಸಮಯ ಪರಿಪಾಲನೆಯನ್ನು ಎಲ್ಲ ಕಂಬಳಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಬ್ಬ ಓಟಗಾರರನಿಗೆ ಪ್ರತಿ ವಿಭಾಗದಲ್ಲೂ ಒಂದು ಜತೆ ಕೋಣಗಳನ್ನು ಓಡಿಸಲು ಮಾತ್ರ ಅವಕಾಶವಿದೆ. ಅನಿವಾರ್ಯ ಸಂದರ್ಭದಲ್ಲಿ ತೀರ್ಪುಗಾರ ಹಾಗೂ ವ್ಯವಸ್ಥಾಪಕರ ಅನುಮತಿ ಪಡೆದ ಬಳಿಕ ಮಾತ್ರ ಎರಡು ಜತೆ ಕೋಣಗಳನ್ನು ಓಡಿಸಬಹುದು ಎಂದರು.
ಈಗಾಗಲೇ ನಡೆದ ಕಂಬಳಗಳು ವಿಳಂಬವಾಗಿ ಮುಕ್ತಾಯವಾಗಿರುವ ಬಗ್ಗೆ ದೂರುಗಳು ಬಂದಿದ್ದು ಗಂತಿನಲ್ಲಿ ಕೋಣಗಳನ್ನು ಬಿಡುವವರು ಅನಗತ್ಯವಾಗಿ ವಿಳಂಬ ಮಾಡಿದಲ್ಲಿ, ಮಂಜೊಟ್ಟಿ ಮತ್ತು ಗಂತಿನಲ್ಲಿ ಓಟಗಾರರು ಕೋಣಗಳಿಗೆ ಹೊಡೆಯುವುದು ಸಾಬೀತಾದಲ್ಲಿ ಅಂತಹವರನ್ನು ಮುಂದಿನ ಎರಡು ಕಂಬಳಗಳಿಗೆ ನಿಷೇಧಿಸಲು ಜಿಲ್ಲಾ ಕಂಬಳ ಸಮಿತಿ ನಿರ್ಣಯಿಸಿದೆ. 24 ಗಂಟೆಗಳಲ್ಲಿ ಮುಕ್ತಾಯಗೊಳ್ಳಬೇಕಾಗಿದ್ದ ಕಂಬಳಗಳು ವಿನಾ ಕಾರಣ ವಿಳಂಬಗೊಳ್ಳುತ್ತಿವೆ. ಇದು ಸರಕಾರದ ನಿಯಮಗಳಿಗೆ ವಿರುದ್ಧವಾಗಿದೆ. ಸಮಯ ಪರಿಪಾಲನೆಯನ್ನು ಎಲ್ಲ ಕಂಬಳಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಬ್ಬ ಓಟಗಾರರನಿಗೆ ಪ್ರತಿ ವಿಭಾಗದಲ್ಲೂ ಒಂದು ಜತೆ ಕೋಣಗಳನ್ನು ಓಡಿಸಲು ಮಾತ್ರ ಅವಕಾಶವಿದೆ.