ನಿರಂತರ ಮಳೆ: ದಕ ಜಿಲ್ಲೆಯಲ್ಲಿ ನಾಳೆ (ಜು.20) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Spread the love

ನಿರಂತರ ಮಳೆ: ದಕ ಜಿಲ್ಲೆಯಲ್ಲಿ ನಾಳೆ (ಜು.20) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಘೋಷಿಸಿದ್ದಾರೆ.


Spread the love