Home Mangalorean News Kannada News ನಿವೇಶನ ಹಕ್ಕು ಪತ್ರ ಮತ್ತು ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ : ಶಾಸಕ ಜೆ.ಆರ್.ಲೋಬೊ

ನಿವೇಶನ ಹಕ್ಕು ಪತ್ರ ಮತ್ತು ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ : ಶಾಸಕ ಜೆ.ಆರ್.ಲೋಬೊ

Spread the love

ನಿವೇಶನ ಹಕ್ಕು ಪತ್ರ ಮತ್ತು ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿ ಗಳಿಗೆ ಶಾಸಕ ಜೆ.ಆರ್.ಲೋಬೊ ಅವರು ನಿವೇಶನ ಹಂಚಿಕೆ ಪತ್ರ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಹಲವು ವರ್ಷಗಳಿಂದ ಶಾಂತ ಆಳ್ವ ಕಂಪೌಂಡ್ ನಿವಾಸಿಗಳು ಹಕ್ಕುಪತ್ರ ವಿಲ್ಲದೆ ಪರದಾಡುತಿದ್ದರು. ಈಗ ಈ ಸಮಸ್ಯೆಯನ್ನು ನೀಗಿಸಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ನಗರ ಇತರ ಕಡೆಗಳಲ್ಲೂ ವಾಸಿಸುತ್ತಿರುವವವರಿಗೆ ಕಾನೂನು ಬದ್ಧ ರೀತಿಯಲ್ಲಿ ಹಕ್ಕು ಪತ್ರ ಹಂಚಲಾಗುವುದು ಎಂದು ತಿಳಿಸಿದ ಅವರು  ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ನೀಡಿ ಹಲವಾರು ವರ್ಷಗಳಿಂದ ಗುರುತಿನ ಚೀಟಿ ಇಲ್ಲದೆ ವ್ಯಾಪಾರ ಮಾಡುತ್ತಿದ್ದವರು ಇನ್ನು ಮುಂದೆ ಗುರುತಿನ ಚೀಟಿಯೊಂದಿಗೆ ವ್ಯಾಪಾರ ಮಾಡುವಂತಾಗಿದೆ ಎಂದರು.

ಕರ್ನಾಟಕದಲ್ಲಿ ಪ್ರಥಮವಾಗಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ನೀಡಿದ್ದು ಇದರ ಪ್ರಯೋಜನ ಪಡೆಯಬೇಕು. ಬೀದಿ ಬದಿ ವ್ಯಾಪಾರಸ್ಥರಿಗೆ ಬೇಕಾಗುವ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಈ ಮೂಲಕ ಬಡವರಿಗೆ ಆಶೋತ್ತರ ಈಡೇರಿಸಲಾಗಿರುವ ಬಗ್ಗೆ ಹೆಮ್ಮೆಯೆನಿಸುತ್ತದೆ. ಈ ನೆರವನ್ನು ಎಲ್ಲರೂ ಸ್ವೀಕರಿಸಿ ಬದುಕನ್ನು ನೆಮ್ಮದಿಯಿಂದ ಕಳೆಯುವಂತೆ ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮೇಯರ್ ಕವಿತಾ ಸನಿಲ್, ಉಪಮೇಯರ್ ರಜನೀಶ್ ಕಾಪಿಕಾಡ್ ಮುಂತಾದವರಿದ್ದರು.

ಮಾತೃಪೂರ್ಣ ಯೋಜನೆ ಜಾರಿಗೆ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಶಾಸಕರಾದ ಜೆ.ಆರ್.ಲೋಬೊ ಅವರು ಅತ್ತಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಸರ್ಕಾರದ ನೂತನ ಯೋಜನೆಯಾದ ಮಾತೃಪೂರ್ಣ ಯೋಜನೆಯನ್ನು ಉದ್ಘಾಟಿಸಿದರು.

ಗರ್ಭಿಣಿ ಹಾಗೂ ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಠಿಕ ಬಿಸಿಯೂಟ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ ಸರ್ಕಾರ ವಿನೂತನ ಯೋಜನೆಯನ್ನು ತಂದು ಬಡವರಿಗೂ ಈ ಯೋಜನೆಯ ಫಲ ಸಿಗಬೇಕು ಮತ್ತು ಆ ಮೂಲಕ ಬಡವರು ಪೌಷ್ಠಿಕ ಆಹಾರದ ಕೊರತೆಯಿಂದ ಉಳಿಯ ಬಾರದು ಎಂದರು.

ಸಮಾರಂಭದಲ್ಲಿ ಮಹಾನರ ಪಾಲಿಕೆ ಮೇಯರ್ ಕವಿತ ಸನಿಲ್ ಮತ್ತು ಸ್ಥಾಯಿ ಸಮಿತಿ ಸದಸ್ಯ ರವೂಫ್ ಉಪಸ್ಥಿತರಿದ್ದರು.


Spread the love

Exit mobile version