ನಿಷೇದಿತ ಎಂ.ಡಿ.ಎಂ.ಎ ಮಾದಕ ವಸ್ತು ಸಾಗಾಟ ಇಬ್ಬರ ಬಂಧನ

Spread the love

ನಿಷೇದಿತ ಎಂ.ಡಿ.ಎಂ.ಎ ಮಾದಕ ವಸ್ತು ಸಾಗಾಟ ಇಬ್ಬರ ಬಂಧನ

ಮಂಗಳೂರು: ನಿಷೇದಿತ ಎಂ.ಡಿ.ಎಂ.ಎ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬಂಟ್ವಾಳ ಕೆದಿಲ ನಿವಾಸಿ ಮೊಹಮ್ಮದ್ ನಾಸೀರ್ (24), ಮಹಮ್ಮದ್ ಆಸೀಫ್ (21) ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು ದಿನಾಂಕ 09-08-2024 ರಂದು ಬೆಳಿಗ್ಗೆ, ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದು, ಈ ವೇಳೆ ಸದ್ರಿ ಮಾರ್ಗವಾಗಿ ಬಂದ ಕೆಎ-21-ಸಿ-3003 ನೇ ನೋಂದಣಿ ಸಂಖ್ಯೆಯ ಅಟೋರಿಕ್ಷಾವನ್ನು ತಪಾಸಣೆಗಾಗಿ ನಿಲ್ಲಿಸಲು ಸೂಚಿಸಿದಾಗ, ನಿಲ್ಲಿಸದೇ ಮುಂದಕ್ಕೆ ಚಲಾಯಿಸಿ, ವಾಹನವನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿ ವಾಹನದಲ್ಲಿದ್ದ ಚಾಲಕ ಮತ್ತು ಹಿಂದಿನ ಸೀಟಿನಲ್ಲಿದ್ದ ವ್ಯಕ್ತಿಯು ವಾಹನದಿಂದ ಇಳಿದು ಓಡಲು ಪ್ರಯತ್ನಿಸಿರುತ್ತಾರೆ. ಸದ್ರಿ ಆಪಾದಿತರುಗಳನ್ನು ಹಿಡಿದು ವಿಚಾರಿಸಲಾಗಿ ಸಮರ್ಪಕವಾದ ಉತ್ತರ ನೀಡದಿರುವ ಹಿನ್ನೆಲೆಯಲ್ಲಿ ವಾಹನದ ದಾಖಲಾತಿಗಳನ್ನು ಹಾಗೂ ವಾಹನವನ್ನು ತಪಾಸಣೆ ನಡೆಸಿದಾಗ, ಅಟೋರಿಕ್ಷಾದಲ್ಲಿ ಸುಮಾರು 18,720 ರೂ ಮೌಲ್ಯದ 9.36 ಗ್ರಾಂ ನಿಷೇದಿತ ಎಂ.ಡಿ.ಎಂ.ಎ ಮಾದಕ ವಸ್ತು ಮತ್ತು 15 ಚಿಕ್ಕ ಚಿಕ್ಕ ಪ್ಲಾಸ್ಟಿಕ್ ಕವರ್ಗಳು ಪತ್ತೆಯಾಗಿರುತ್ತದೆ. ಮುಂದಿನ ಕಾನೂನು ಕ್ರಮಕ್ಕಾಗಿ ಮಾದಕ ವಸ್ತುವನ್ನು , ಅಟೋರಿಕ್ಷಾವನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 94/2024 ಕಲಂ: U/s 8(c) 22(b) ಎನ್.ಡಿ.ಪಿ.ಎಸ್ ಕಾಯ್ದೆ ಮತ್ತು ಕಲಂ: 3(5) BNS 2023 ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

 

 


Spread the love