Spread the love
ನೀರಕಟ್ಟೆ: ಬಸ್ ಪಲ್ಟಿ; ಓರ್ವ ಮೃತ್ಯು, 12 ಮಂದಿಗೆ ಗಾಯ
ಉಪ್ಪಿನಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿ, ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಏಪ್ರಿಲ್ 4 ರಂದು ಬೆಳಿಗ್ಗೆ 5 ಗಂಟೆಗೆ ನಡೆದಿದೆ.
ಮೃತಪಟ್ಟವರನ್ನು ಬೆಂಗಳೂರು, ಯಡಿಯೂರು ನಿವಾಸಿ ಹರ್ಷ (24) ಎಂದು ಗುರುತಿಸಲಾಗಿದೆ. ಅವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮುಲ್ಕಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಗಾಯಗೊಂಡ 12 ಮಂದಿಯಲ್ಲಿ 11 ಜನರು ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Spread the love